Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:62 - ಪರಿಶುದ್ದ ಬೈಬಲ್‌

62 ಆ ಸಮಯದಲ್ಲಿ, ಇಸಾಕನು ಬೀರ್‌ಲಹೈರೋಯಿಗೆ ಹೋಗಿ ಬಂದಿದ್ದನು; ಯಾಕೆಂದರೆ ಅವನು ನೆಗವ್‌ನಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಅಷ್ಟರಲ್ಲಿ ಇಸಾಕನು ಬೆರ್ ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಅವನು ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ಇತ್ತ ಇಸಾಕನು ‘ಲಹೈರೋಯಿ’ ಎಂಬಲ್ಲಿಗೆ ಹೋಗಿ ಬಂದು ಕಾನಾನ್ ನಾಡಿನ ದಕ್ಷಿಣ ಪ್ರಾಂತದಲ್ಲಿ ವಾಸಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಅಷ್ಟರಲ್ಲಿ ಇಸಾಕನು ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಇಸಾಕನು ಬೇರ್ ಲಹೈರೋಯಿ ಬಾವಿಗೆ ಹೋಗಿ ಬಂದನು. ಅವನು ದೇಶದ ನೆಗೆವನಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:62
5 ತಿಳಿವುಗಳ ಹೋಲಿಕೆ  

ಅಬ್ರಹಾಮನು ತೀರಿಕೊಂಡ ಮೇಲೆ, ದೇವರು ಇಸಾಕನನ್ನು ಆಶೀರ್ವದಿಸಿದನು; ಇಸಾಕನು ಬೀರ್‌ಲಹೈರೋಯಿಯಲ್ಲಿ ತನ್ನ ಜೀವನವನ್ನು ಮುಂದುವರೆಸಿದನು.


ಆದ್ದರಿಂದ ಆ ಬಾವಿಗೆ ಬೀರ್‌ಲಹೈರೋಯಿ (ಬೀರ್‌ಲಹೈರೋಯಿ. ಇದರರ್ಥ: “ನನ್ನನ್ನು ನೋಡುವ ಜೀವಸ್ವರೂಪನ ಬಾವಿ.”) ಎಂದು ಹೆಸರಾಯಿತು. ಈ ಬಾವಿಯು ಕಾದೇಶಿಗೂ ಬೆರೆದಿಗೂ ನಡುವೆ ಇದೆ.


ಅಬ್ರಹಾಮನು ಅಲ್ಲಿಂದ ಹೊರಟು ನೆಗೆವ್‌ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು.


ತರುವಾಯ ಅವನು ಮತ್ತೆ ಪ್ರಯಾಣವನ್ನು ಮುಂದುವರಿಸಿ ನೆಗೆವ್ ಸ್ಥಳದ ಕಡೆಗೆ ಹೋದನು.


ಆಮೇಲೆ ರೆಬೆಕ್ಕಳು ಮತ್ತು ಆಕೆಯ ಸೇವಕಿಯರು ಒಂಟೆಯ ಮೇಲೆ ಹತ್ತಿ ಕುಳಿತುಕೊಂಡು ಆ ಸೇವಕನನ್ನೂ ಅವನ ಸಂಗಡಿಗರನ್ನೂ ಹಿಂಬಾಲಿಸಿದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಮನೆಗೆ ಮರಳಿ ಪ್ರಯಾಣಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು