ಆದಿಕಾಂಡ 24:65 - ಪರಿಶುದ್ದ ಬೈಬಲ್65 ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)65 “ನಮ್ಮ ಕಡೆ ಹೊಲದಲ್ಲಿ ನಡೆದು ಬರುತ್ತಿರುವ ಆ ಮನುಷ್ಯ ಯಾರು?” ಎಂದು ಆ ಸೇವಕನನ್ನು ಕೇಳಿದಳು. “ಅವನೇ ನನ್ನೊಡೆಯ” ಎಂದು ಹೇಳಿದಾಗ ಆಕೆ ಮುಸಕುಹಾಕಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)65 ನಮ್ಮನ್ನು ಎದುರುಗೊಳ್ಳುವದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರೆಂದು ಆ ಸೇವಕನನ್ನು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕುಹಾಕಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ65 ಆಕೆಯು ಆ ಸೇವಕನಿಗೆ, “ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು?” ಎಂದಳು. ಅದಕ್ಕೆ ಸೇವಕನು, “ಅವನೇ ನನ್ನ ಯಜಮಾನನು,” ಎಂದಾಗ, ಆಕೆಯು ಮುಸುಕು ಹಾಕಿಕೊಂಡಳು. ಅಧ್ಯಾಯವನ್ನು ನೋಡಿ |
ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.