ಆದಿಕಾಂಡ 24:67 - ಪರಿಶುದ್ದ ಬೈಬಲ್67 ನಂತರ ಇಸಾಕನು ಆಕೆಯನ್ನು ಕರೆದುಕೊಂಡು ತನ್ನ ತಾಯಿಯ ಗುಡಾರಕ್ಕೆ ಬಂದನು. ಅಂದು ರೆಬೆಕ್ಕಳು ಇಸಾಕನ ಹೆಂಡತಿಯಾದಳು. ಇಸಾಕನು ಅವಳನ್ನು ಬಹಳವಾಗಿ ಪ್ರೀತಿಸಿದನು. ತಾಯಿಯ ಸಾವಿನಿಂದ ಉಂಟಾಗಿದ್ದ ದುಃಖವು ಕಡಿಮೆಯಾಗಿ ಇಸಾಕನಿಗೆ ಆದರಣೆಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201967 ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)67 ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)67 ಇಸಾಕನು ಆಕೆಯನ್ನು ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಈ ರೀತಿಯಾಗಿ ಅವನು ರೆಬೆಕ್ಕಳನ್ನು ವರಿಸಿದನು. ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸತ್ತ ದುಃಖವನ್ನು ಶಮನ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ67 ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಸ್ವೀಕರಿಸಿದನು. ಆಕೆಯು ಅವನ ಹೆಂಡತಿಯಾದಳು, ಅವನು ಆಕೆಯನ್ನು ಪ್ರೀತಿಸಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ದುಃಖ ಶಮನ ಮಾಡಿಕೊಂಡನು. ಅಧ್ಯಾಯವನ್ನು ನೋಡಿ |