ಆದಿಕಾಂಡ 24:8 - ಪರಿಶುದ್ದ ಬೈಬಲ್8 ಆದರೆ ಆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಈ ಪ್ರಮಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಆದರೆ ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇಲ್ಲಿಗೆ ನಿನ್ನ ಸಂಗಡ ಬರಲು ಆ ಕನ್ಯೆಗೆ ಇಷ್ಟವಿಲ್ಲದೆಹೋದರೆ, ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವೆ. ಹೇಗೂ ನನ್ನ ಮಗನನ್ನು ಮರಳಿ ಅಲ್ಲಿಗೆ ಕರೆದುಕೊಂಡು ಹೋಗಕೂಡದು,” ಎಂದು ಮತ್ತೊಮ್ಮೆ ಒತ್ತಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಇಷ್ಟವಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಹೇಗೂ ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಕೂಡದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದಿದ್ದರೆ, ನನಗೆ ಮಾಡಿದ ಆ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವೆ. ಆದರೆ ನನ್ನ ಮಗನನ್ನು ಅಲ್ಲಿಗೆ ಮಾತ್ರ ತಿರುಗಿ ಕರೆದುಕೊಂಡು ಹೋಗಬಾರದು,” ಎಂದನು. ಅಧ್ಯಾಯವನ್ನು ನೋಡಿ |