ಆದಿಕಾಂಡ 25:12 - ಪರಿಶುದ್ದ ಬೈಬಲ್12 ಇದು ಇಷ್ಮಾಯೇಲನ ವಂಶಾವಳಿ: ಇಷ್ಮಾಯೇಲನು ಅಬ್ರಹಾಮನ ಮತ್ತು ಹಾಗರಳ ಮಗನು. (ಈಜಿಪ್ಟಿನವಳಾದ ಹಾಗರಳು ಸಾರಳ ಸೇವಕಿ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಬ್ರಹಾಮನಿಗೆ ಸಾರಳ ದಾಸಿಯೂ ಈಜಿಪ್ಟಿನವಳೂ ಆದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶಾವಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಬ್ರಹಾಮನಿಗೆ ಸಾರಳ ದಾಸಿಯಾದ ಐಗುಪ್ತ್ಯಳಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸಾರಳ ದಾಸಿ ಈಜಿಪ್ಟಿನ ಹಾಗರಳು ಅಬ್ರಹಾಮನಿಗೆ ಹೆತ್ತ ಮಗ ಇಷ್ಮಾಯೇಲನ ವಂಶಾವಳಿ: ಅಧ್ಯಾಯವನ್ನು ನೋಡಿ |
ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.