ಆದಿಕಾಂಡ 25:16 - ಪರಿಶುದ್ದ ಬೈಬಲ್16 ಪ್ರತಿಯೊಬ್ಬನೂ ತನ್ನದೇ ಆದ ಪಾಳೆಯವನ್ನು ಹೊಂದಿದ್ದನು. ಆ ಪಾಳೆಯಗಳೇ ಮುಂದೆ ಚಿಕ್ಕ ಪಟ್ಟಣಗಳಾದವು. ಈ ಹನ್ನೆರಡು ಮಂದಿ ಗಂಡುಮಕ್ಕಳು ತಮ್ಮ ಜನರಿಗೆ ಹನ್ನೆರಡು ಮಂದಿ ರಾಜರುಗಳಂತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವರೇ ಆ ಹನ್ನೆರಡು ಕುಲದ ಮೂಲಪುರುಷರು. ಈ ಹೆಸರುಗಳನ್ನು ಅವರು ವಾಸಿಸಿದ್ದ ಊರುಗಳಿಗೂ ಪಾಳೆಯಗಳಿಗೂ ಇಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಹೆಸರುಗಳು ಊರುಗಳಲ್ಲಿಯೂ ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರಿಗೆ ಇರುವವು. ಇವರ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವರೇ ಇಷ್ಮಾಯೇಲನ ಪುತ್ರರು. ಇವುಗಳೇ ಅವರ ಗ್ರಾಮಗಳ ಪ್ರಕಾರವಾಗಿಯೂ, ಪಾಳೆಯಗಳ ಪ್ರಕಾರವಾಗಿಯೂ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು. ಅಧ್ಯಾಯವನ್ನು ನೋಡಿ |