ಆದಿಕಾಂಡ 25:20 - ಪರಿಶುದ್ದ ಬೈಬಲ್20 ಇಸಾಕನು ನಲವತ್ತು ವರ್ಷದವನಾಗಿದ್ದಾಗ ರೆಬೆಕ್ಕಳನ್ನು ಮದುವೆಯಾದನು. ರೆಬೆಕ್ಕಳು ಪದ್ದನ್ ಅರಾಮಿನವಳು. ಆಕೆ ಬೆತೂವೇಲನ ಮಗಳು ಮತ್ತು ಅರಾಮ್ಯನಾದ ಲಾಬಾನನ ತಂಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇಸಾಕನು ನಲವತ್ತು ವರ್ಷದವನಾಗಿದ್ದಾಗ ಅರಾಮ್ಯರಾದ ಬೆತುವೇಲನ ಮಗಳೂ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಮೆಸಪೊಟೇಮಿಯಾದಿಂದ ಬರಮಾಡಿಸಿಕೊಂಡು ಮದುವೆಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇಸಾಕನು ನಾಲ್ವತ್ತು ವರುಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳಾಗಿಯೂ ಅರಾಮ್ಯನಾದ ಲಾಬಾನನ ತಂಗಿಯಾಗಿಯೂ ಇದ್ದ ರೆಬೆಕ್ಕಳನ್ನು ಪದ್ದನ್ ಅರಾವಿುನಿಂದ ತರಿಸಿ ಹೆಂಡತಿಯಾಗಿ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |