ಆದಿಕಾಂಡ 25:22 - ಪರಿಶುದ್ದ ಬೈಬಲ್22 ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಕೆಯ ಗರ್ಭದಲ್ಲಿದ್ದ ಅವಳಿ ಮಕ್ಕಳು ಒಂದನ್ನೊಂದು ಒತ್ತರಿಸಿದಾಗ ಆಕೆ, “ನನಗೇತಕ್ಕೆ ಹೀಗಾಗುತ್ತಿದೆ?” ಎಂದುಕೊಂಡು ಸರ್ವೇಶ್ವರ ಸ್ವಾಮಿಯನ್ನು ವಿಚಾರಿಸಲು ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು - ಹೀಗಾದರೆ ನಾನು ಯಾಕೆ ಬದುಕಬೇಕು ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವಳ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು, “ನನಗೆ ಏಕೆ ಹೀಗಾಗುತ್ತಿದೆ?” ಎಂದು ಕೇಳಿ, ಯೆಹೋವ ದೇವರ ಬಳಿಗೆ ವಿಚಾರಿಸುವುದಕ್ಕೆ ಹೋದಳು. ಅಧ್ಯಾಯವನ್ನು ನೋಡಿ |
ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.