ಆದಿಕಾಂಡ 25:27 - ಪರಿಶುದ್ದ ಬೈಬಲ್27 ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನೆಂಬವನು ಬೇಟೆಯಾಡುವದರಲ್ಲಿ ಜಾಣನಾದನು; ಅವನು ಅರಣ್ಯವಾಸಿ. ಯಾಕೋಬನು ಸಾಧುಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆ ಹುಡುಗರು ಬೆಳೆದಾಗ ಏಸಾವನು ಬೇಟೆಯಾಡುವುದರಲ್ಲಿ ಜಾಣನಾಗಿದ್ದು, ಅಡವಿಯ ಮನುಷ್ಯನಾದನು. ಯಾಕೋಬನು ಗುಡಾರಗಳಲ್ಲಿ ವಾಸಮಾಡುವ ಸಾಧು ಮನುಷ್ಯನಾಗಿದ್ದನು. ಅಧ್ಯಾಯವನ್ನು ನೋಡಿ |
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.