Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:29 - ಪರಿಶುದ್ದ ಬೈಬಲ್‌

29 ಒಂದು ಸಲ ಏಸಾವನು ಬೇಟೆಯಿಂದ ಹಿಂತಿರುಗಿ ಬಂದಾಗ ಹಸಿವೆಯಿಂದ ಆಯಾಸಗೊಂಡಿದ್ದನು ಮತ್ತು ಬಲಹೀನನಾಗಿದ್ದನು. ಯಾಕೋಬನು ಅಲಸಂಧಿ ಗುಗ್ಗರಿ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಒಮ್ಮೆ ಯಕೋಬನು ಅಡಿಗೆ ಮಾಡುತ್ತಿದ್ದ. ಏಸಾವನು ಕಾಡಿನಿಂದ ದಣಿದು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಒಂದು ಸಾರಿ ಯಾಕೋಬನು ಅಡಿಗೆ ಮಾಡುತ್ತಿದ್ದಾಗ, ಏಸಾವನು ದಣಿದು ಅಡವಿಯಿಂದ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:29
10 ತಿಳಿವುಗಳ ಹೋಲಿಕೆ  

ಶಿಷ್ಟನು ತೃಪ್ತಿಯಾಗುವಷ್ಟು ತಿನ್ನುವನು. ಆದರೆ ದುಷ್ಟನು ಹಸಿವೆಯಿಂದಿರುವನು.


ಸೈನಿಕನೊಬ್ಬ ಯೋನಾತಾನನಿಗೆ, “‘ಈ ದಿನ ಸಾಯಂಕಾಲದೊಳಗೆ ಊಟಮಾಡುವವನು ಶಾಪಗ್ರಸ್ತನಾಗಲಿ’ ಎಂದು ನಿಮ್ಮ ತಂದೆ ಆಣೆಯಿಟ್ಟು ಹೇಳಿದ್ದಾನೆ ಆದಕಾರಣವೇ ಸೈನಿಕರು ಬಲಹೀನರಾಗಿದ್ದಾರೆ” ಎಂದು ತಿಳಿಸಿದನು.


ಅಂದು ಇಸ್ರೇಲರು ಫಿಲಿಷ್ಟಿಯರನ್ನು ಸೋಲಿಸಿದರು. ಅವರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ದಾರಿಯುದ್ದಕ್ಕೂ ಹೋರಾಡಿದರು. ಆದಕಾರಣ ಜನರು ಬಹಳವಾಗಿ ಬಳಲಿದ್ದರು ಮತ್ತು ಹಸಿದಿದ್ದರು.


ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಆಯಾಸವಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” ಎಂದು ಕರೆಯುತ್ತಾರೆ.)


ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.


ಎಲೀಷನು ಗಿಲ್ಗಾಲಿಗೆ ಮತ್ತೆ ಬಂದನು. ಆಗ ಆ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲಿಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು.


ಒಬ್ಬನು ಅಡಿಗೆಯ ಸೊಪ್ಪಿಗಾಗಿ ತೋಟಕ್ಕೆ ಹೋದನು. ಅಲ್ಲಿ ಅವನು ಒಂದು ಕಾಡುಬಳ್ಳಿಯಿಂದ ಕಾಡುಸೋರೆ ಕಾಯಿಗಳನ್ನು ಕಿತ್ತುಕೊಂಡು, ಅವುಗಳನ್ನು ತನ್ನ ಮೇಲಂಗಿಯ ಜೇಬಿನಲ್ಲಿ ತುಂಬಿಸಿಕೊಂಡನು. ನಂತರ ಅವನು ಬಂದು, ಆ ಕಾಡುಸೋರೆ ಕಾಯಿಗಳನ್ನು ಪಾತ್ರೆಯಲ್ಲಿ ಹಾಕಿದನು. ಆದರೆ ಪ್ರವಾದಿಗಳ ಗುಂಪಿಗೆ ಅವು ಯಾವ ಜಾತಿಯ ಸೋರೆಕಾಯಿಗಳೆಂಬುದು ತಿಳಿದಿರಲಿಲ್ಲ.


‘ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದ್ದರಿಂದ ಅದು ಪವಿತ್ರವಾದದ್ದು. ಆ ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರವಸ್ತುವಾಗಬಹುದೇ?’” ಯಾಜಕರು ಉತ್ತರವಾಗಿ, “ಇಲ್ಲ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು