Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:33 - ಪರಿಶುದ್ದ ಬೈಬಲ್‌

33 ಆದರೆ ಯಾಕೋಬನು, “ನೀನು ಅದನ್ನು ಕೊಡುವುದಾಗಿ ಪ್ರಮಾಣಮಾಡು” ಅಂದನು. ಆದ್ದರಿಂದ ಏಸಾವನು ಯಾಕೋಬನಿಗೆ ಪ್ರಮಾಣ ಮಾಡಿದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಯಾಕೋಬನಿಗೆ ಮಾರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯಕೋಬನು ‘ಮಾರಿರುವುದಾಗಿ ನನಗೆ ಪ್ರಮಾಣ ಮಾಡು’, ಎಂದಾಗ ಏಸಾವನು ಪ್ರಮಾಣಮಾಡಿ ತನ್ನ ಜ್ಯೇಷ್ಠತನದ ಹಕ್ಕನ್ನು ಮಾರಿಬಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯಾಕೋಬನು - ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯಾಕೋಬನು, “ಈ ಹೊತ್ತು ನನಗೆ ಪ್ರಮಾಣಮಾಡು,” ಎಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ, ತನ್ನ ಜೇಷ್ಠ ಪುತ್ರನ ಹಕ್ಕನ್ನು ಅವನಿಗೆ ಮಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:33
11 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.


ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.


ಏಸಾವನು, “ಅವನ ಹೆಸರು ಯಾಕೋಬ (ಮೋಸಗಾರ). ಅದೇ ಅವನಿಗೆ ಸರಿಯಾದ ಹೆಸರು. ಅವನು ಎರಡು ಸಲ ನನಗೆ ಮೋಸಮಾಡಿದನು. ನನ್ನ ಚೊಚ್ಚಲತನದ ಹಕ್ಕನ್ನು ತೆಗೆದುಕೊಂಡನು. ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡನು” ಎಂದು ಹೇಳಿದನು. ನಂತರ ಏಸಾವನು, “ನನಗೋಸ್ಕರ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.


ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.


ಕಾನಾನ್ ದೇಶದ ಕನ್ನಿಕೆಯನ್ನು ನನ್ನ ಮಗನು ಮದುವೆಯಾಗದಂತೆ ನೀನು ನೋಡಿಕೊಳ್ಳುವುದಾಗಿಯೂ


ಆದರೆ ಅಬ್ರಾಮನು ಅವನಿಗೆ, “ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಮಹೋನ್ನತನಾಗಿರುವ ದೇವರಾದ ಯೆಹೋವನಿಗೆ ಪ್ರಮಾಣಮಾಡಿ ಹೇಳುವುದೇನೆಂದರೆ,


ಏಸಾವನು, “ನನಗೆ ಹಸಿವೆಯಿಂದ ಸಾಯುವಂತಾಗಿದೆ. ನಾನು ಸತ್ತುಹೋದರೆ, ನನ್ನ ತಂದೆಯ ಐಶ್ವರ್ಯವೆಲ್ಲ ನನಗೆ ಸಹಾಯ ಮಾಡಲಾರದು. ಆದ್ದರಿಂದ ನಾನು ನನ್ನ ಹಕ್ಕನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.


ಇಸಾಕನು ಮುದುಕನಾದಾಗ ಅವನಿಗೆ ಕಣ್ಣುಗಳು ಸ್ಪಷ್ಟವಾಗಿ ಕಾಣುತ್ತಿರಲಿಲ್ಲ. ಒಂದು ದಿನ ಅವನು ತನ್ನ ಹಿರಿಮಗನಾದ ಏಸಾವನನ್ನು ತನ್ನ ಬಳಿಗೆ ಕರೆದು ಅವನಿಗೆ, “ಮಗನೇ” ಅಂದನು. ಏಸಾವನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.


ಇಸಾಕನು ಅವನಿಗೆ, “ನೀನು ಯಾರು?” ಎಂದು ಕೇಳಿದನು. ಅವನು, “ನಾನು ನಿನ್ನ ಹಿರಿಯಮಗನಾದ ಏಸಾವ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು