Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:10 - ಪರಿಶುದ್ದ ಬೈಬಲ್‌

10 ಅಬೀಮೆಲೆಕನು ಅವನಿಗೆ, “ನೀನು ನಮಗೆ ಕೆಟ್ಟದ್ದನ್ನು ಮಾಡಿದೆ. ನಮ್ಮಲ್ಲಿರುವ ಯಾವ ಗಂಡಸಾದರೂ ನಿನ್ನ ಹೆಂಡತಿಯೊಡನೆ ಮಲಗಿಕೊಳ್ಳಲು ನೀನೇ ಆಸ್ಪದ ಮಾಡಿಕೊಟ್ಟಿದ್ದೆ. ಅಂಥದ್ದೇನಾದರೂ ನಡೆದಿದ್ದರೆ ಮಹಾ ಅಪರಾಧವಾಗುತ್ತಿತ್ತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಮಾಡಬಹುದೆ? ನಮ್ಮಲ್ಲಿ ಯಾರಾದರೊಬ್ಬನು ನಿನ್ನ ಹೆಂಡತಿಯನ್ನು ಕೂಡಿರಬಹುದಿತ್ತಲ್ಲವೆ? ಆಗ ನಿನ್ನಿಂದ ನನಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲವೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಅಬೀಮೆಲೆಕನು - ನೀನು ನಮಗೆ ಹೀಗೆ ಯಾಕೆ ಮಾಡಿದಿ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಕೂಡುವದಕ್ಕೆ ಆಸ್ಪದವಾಗಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ ಎಂದು ಹೇಳಿ ತನ್ನ ಪ್ರಜೆಗಳಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅಬೀಮೆಲೆಕನು, “ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯನ್ನು ತೆಗೆದುಕೊಂಡಿದ್ದರೆ, ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:10
4 ತಿಳಿವುಗಳ ಹೋಲಿಕೆ  

ಅಬೀಮೆಲೆಕನು ಇಸಾಕನನ್ನು ಕರೆದು, “ಈ ಸ್ತ್ರೀಯು ನಿನ್ನ ಹೆಂಡತಿ. ಅವಳು ನಿನ್ನ ತಂಗಿಯೆಂದು ಯಾಕೆ ನಮಗೆ ಹೇಳಿದೆ?” ಎಂದು ಕೇಳಿದನು. ಇಸಾಕನು ಅವನಿಗೆ, “ನೀನು ಆಕೆಯನ್ನು ತೆಗೆದುಕೊಳ್ಳಲು ನನ್ನನ್ನು ಕೊಲ್ಲಬಹುದೆಂಬ ಭಯದಿಂದ ಹಾಗೆ ಹೇಳಿದೆ” ಅಂದನು.


ಮುಂಜಾನೆ ಯಾಕೋಬನು ಎದ್ದು ನೋಡಿದಾಗ ಅವನೊಂದಿಗೆ ಲೇಯಾ ಇದ್ದಳು. ಯಾಕೋಬನು ಲಾಬಾನನಿಗೆ, “ನೀನು ನನಗೆ ಮೋಸ ಮಾಡಿದೆ. ನಾನು ರಾಹೇಲಳನ್ನು ಮದುವೆ ಮಾಡಿಕೊಳ್ಳುವುದಕ್ಕಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿದೆ. ನೀನು ನನಗೇಕೆ ಮೋಸ ಮಾಡಿದೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು