ಆದಿಕಾಂಡ 26:18 - ಪರಿಶುದ್ದ ಬೈಬಲ್18 ಇದಕ್ಕೂ ಬಹುಕಾಲದ ಹಿಂದೆ, ಅಬ್ರಹಾಮನು ಅನೇಕ ಬಾವಿಗಳನ್ನು ತೋಡಿಸಿದ್ದನು. ಅಬ್ರಹಾಮನು ಸತ್ತುಹೋದ ಮೇಲೆ, ಫಿಲಿಷ್ಟಿಯರು ಆ ಬಾವಿಗಳಿಗೆ ಮಣ್ಣುಹಾಕಿ ಮುಚ್ಚಿದ್ದರು. ಇಸಾಕನು ಆ ಬಾವಿಗಳನ್ನು ಮತ್ತೆ ತೋಡಿಸಿ, ತನ್ನ ತಂದೆ ಕೊಟ್ಟಿದ್ದ ಹೆಸರುಗಳನ್ನೇ ಅವುಗಳಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ಮರಳಿ ತೆಗೆಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ತಿರಿಗಿ ತೆಗಿಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ಇಸಾಕನು ತನ್ನ ತಂದೆ ಅಬ್ರಹಾಮನ ದಿನಗಳಲ್ಲಿ ಅಗೆದಂಥ ಬಾವಿಗಳನ್ನು ತಿರುಗಿ ಅಗೆದನು. ಏಕೆಂದರೆ ಅಬ್ರಹಾಮನು ಮರಣದ ನಂತರ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರುಕೊಟ್ಟನು. ಅಧ್ಯಾಯವನ್ನು ನೋಡಿ |
ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.