Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:24 - ಪರಿಶುದ್ದ ಬೈಬಲ್‌

24 ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:24
41 ತಿಳಿವುಗಳ ಹೋಲಿಕೆ  

ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಪ್ರಭುವು ಅವನಿಗೆ, ‘ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು.


ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.


ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ (ಇಸ್ರೇಲೇ), ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ಯಾಕೋಬನು, ರಾಹೇಲಳಿಗೆ ಮತ್ತು ಲೇಯಾಳಿಗೆ, “ನಿಮ್ಮ ತಂದೆ ನನ್ನ ಮೇಲೆ ಕೋಪದಿಂದಿರುವುದನ್ನು ನಾನು ಗಮನಿಸಿದ್ದೇನೆ. ಮೊದಲು ಅವನು ನನ್ನೊಂದಿಗೆ ಸ್ನೇಹದಿಂದಿದ್ದನು. ಆದರೆ ಈಗ ಅವನು ಸ್ನೇಹದಿಂದಿಲ್ಲ. ಆದರೆ ನನ್ನ ತಂದೆಯ ದೇವರು ನನ್ನೊಂದಿಗಿದ್ದಾನೆ.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಹೋದನು. ಅವರೆಲ್ಲರೂ ಬೇರ್ಷೆಬಕ್ಕೆ ಮರಳಿ ಪ್ರಯಾಣ ಮಾಡಿದರು. ಬಳಿಕ ಅಬ್ರಹಾಮನು ಅಲ್ಲೇ ವಾಸಿಸಿದನು.


ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.


“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.


ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ.


ಆದ್ದರಿಂದ ಇಸ್ರೇಲನು ಈಜಿಪ್ಟಿಗೆ ಪ್ರಯಾಣ ಬೆಳೆಸಿದನು. ಅವನು ಬೇರ್ಷೆಬಕ್ಕೆ ಹೋಗಿ ತನ್ನ ತಂದೆಯಾದ ಇಸಾಕನ ದೇವರನ್ನು ಆರಾಧಿಸಿ ಯಜ್ಞಗಳನ್ನು ಅರ್ಪಿಸಿದನು.


ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.


ಆದರೆ ಯೆಹೋವನ ಸಹಾಯದಿಂದ ಯೋಸೇಫನು ಏಳಿಗೆಯಾಗಿ ತನ್ನ ಯಜಮಾನನಾದ ಈಜಿಪ್ಟಿನ ಪೋಟೀಫರನ ಮನೆಯಲ್ಲಿ ಸೇವಕನಾದನು.


ಯೆಹೋವನು ಯೋಸೇಫನ ಸಂಗಡವಿದ್ದು ಅವನನ್ನು ಎಲ್ಲಾ ಕೆಲಸಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ಮಾಡುತ್ತಿರುವುದನ್ನು ಪೋಟೀಫರನು ಗಮನಿಸಿದನು.


ಆದರೆ ಮೋಶೆ ಆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.


ಆಗ ನಾನು ಯಾಕೋಬನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಇಸಾಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.


ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆ. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”


ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”


ತರುಣಿಯೇ, ಹೆದರಬೇಡ, ನಿನ್ನ ಇಚ್ಛೆಯನ್ನು ನೆರವೇರಿಸುತ್ತೇನೆ. ನೀನು ಒಳ್ಳೆಯ ಸ್ತ್ರೀ ಎಂಬುದು ನಮ್ಮ ಪಟ್ಟಣದವರಿಗೆಲ್ಲಾ ಗೊತ್ತಿದೆ.


ಎಲೀಯನು ಆ ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ಆ ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ.


ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು