Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:27 - ಪರಿಶುದ್ದ ಬೈಬಲ್‌

27 ಇಸಾಕನು, “ನೀನು ನನ್ನನ್ನು ನೋಡಲು ಬಂದದ್ದೇಕೆ? ಮೊದಲು, ನೀನು ನನ್ನೊಡನೆ ಸ್ನೇಹದಿಂದ ಇರಲಿಲ್ಲ. ಅಲ್ಲದೆ ನಿನ್ನ ದೇಶವನ್ನು ಬಿಟ್ಟುಹೋಗುವಂತೆ ನೀನು ನನ್ನನ್ನು ಬಲವಂತ ಮಾಡಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇಸಾಕನು, “ನೀವು ನನ್ನ ಮೇಲೆ ಹಗೆತನ ತಾಳಿ ನಿಮ್ಮ ಬಳಿಯಿಂದ ಕಳುಹಿಸಿಬಿಟ್ಟಿರಲ್ಲವೆ? ಈಗ ನನ್ನ ಬಳಿಗೆ ಏಕೆ ಬಂದಿರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀವು ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ ಎಂದು ಅವರನ್ನು ಕೇಳಿದ್ದಕ್ಕೆ ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇಸಾಕನು ಅವರಿಗೆ, “ನನ್ನ ಬಳಿಗೆ ನೀವು ಏಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ, ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿಬಿಟ್ಟಿರಲ್ಲಾ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:27
9 ತಿಳಿವುಗಳ ಹೋಲಿಕೆ  

ಅಬೀಮೆಲೆಕನು ಇಸಾಕನಿಗೆ, “ನಮ್ಮ ದೇಶವನ್ನು ಬಿಟ್ಟುಹೋಗು. ನೀನು ನಮಗಿಂತಲೂ ತುಂಬ ಬಲಿಷ್ಠನಾದೆ” ಎಂದು ಹೇಳಿದನು.


ಆದರೆ ಗಿಲ್ಯಾದಿನ ಹಿರಿಯರಿಗೆ ಯೆಫ್ತಾಹನು, “ನನ್ನ ತಂದೆಯ ಮನೆಯನ್ನು ಬಿಡುವಂತೆ ನೀವು ನನಗೆ ಒತ್ತಾಯ ಮಾಡಿದಿರಿ; ನೀವು ನನ್ನನ್ನು ದ್ವೇಷಿಸುತ್ತೀರಿ. ಆದರೆ ಕಷ್ಟದಲ್ಲಿ ನೀವು ನನ್ನ ಬಳಿಗೆ ಬರುವುದೇಕೆ?” ಎಂದು ಕೇಳಿದನು.


ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.


ಮತ್ತೊಬ್ಬನಿಗೆ ಅನ್ಯಾಯ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ಯಾರಾದರೂ ಹೇಳಿದರೇ? ಇಲ್ಲ!


ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು.


“ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.


ಅವನಿಗೆ ಅನೇಕ ದನಕುರಿಗಳ ಮಂದೆಗಳೂ ಪ್ರಾಣಿಗಳ ಹಿಂಡೂಗಳೂ ಇದ್ದವು. ಇದಲ್ಲದೆ ಅವನಿಗೆ ಅನೇಕ ಸೇವಕರು ಇದ್ದರು. ಇದನ್ನು ಕಂಡು ಫಿಲಿಷ್ಟಿಯರು ಅವನ ಬಗ್ಗೆ ಅಸೂಯೆಪಡುತ್ತಿದ್ದರು.


ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು