ಆದಿಕಾಂಡ 26:28 - ಪರಿಶುದ್ದ ಬೈಬಲ್28 ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡಬೇಕಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದಕ್ಕೆ ಅವರು, “ಸರ್ವೇಶ್ವರ ನಿನ್ನ ಸಂಗಡ ಇದ್ದಾರೆಂಬುದು ನಮಗೆ ಚೆನ್ನಾಗಿ ಕಂಡುಬಂದಿದೆ. ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾದ ಒಪ್ಪಂದ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡುಬಂದದರಿಂದ ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅದಕ್ಕೆ ಅವರು, “ನಿಶ್ಚಯವಾಗಿ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ ಎಂದು ತಿಳಿದು, ನಮಗೂ, ನಿನಗೂ ಮಧ್ಯದಲ್ಲಿ ಒಂದು ಪ್ರಮಾಣವಿರುವ ಹಾಗೆ, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳೋಣವೆಂದು ನಾವು ತೀರ್ಮಾನಿಸಿದ್ದೇವೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.