ಆದಿಕಾಂಡ 26:35 - ಪರಿಶುದ್ದ ಬೈಬಲ್35 ಈ ಮದುವೆಗಳಿಂದ ಇಸಾಕ ಮತ್ತು ರೆಬೆಕ್ಕಳಿಗೆ ತುಂಬ ದುಃಖವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಈ ಪತ್ನಿಗಳ ನಿಮಿತ್ತ ಇಸಾಕನು ಮತ್ತು ರೆಬೆಕ್ಕಳು ದುಃಖಪಡಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆಯುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇವರ ದೆಸೆಯಿಂದ ಇಸಾಕನಿಗೂ, ರೆಬೆಕ್ಕಳಿಗೂ ಮನೋವ್ಯಥೆಯಾಯಿತು. ಅಧ್ಯಾಯವನ್ನು ನೋಡಿ |
ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.