Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:4 - ಪರಿಶುದ್ದ ಬೈಬಲ್‌

4 ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞಾನೇಮವಿಧಿಗಳನ್ನು ಕೈಕೊಂಡು ನಡೆದದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:4
22 ತಿಳಿವುಗಳ ಹೋಲಿಕೆ  

ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ‘ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು’ ಎಂದು ಹೇಳಿದನು.


ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.


ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.


ಬಹಳ ಹಿಂದಿನ ಕಾಲದಲ್ಲಿ ಜೀವಿಸಿದ್ದ ಜನರಲ್ಲಿ ಈ ರೀತಿಯ ನಂಬಿಕೆಯಿದ್ದುದರಿಂದ ದೇವರು ಅವರ ವಿಷಯದಲ್ಲಿ ಸಂತೋಷಪಟ್ಟನು.


ಅಬ್ರಹಾಮನಿಂದ ಬಲಿಷ್ಠವಾದ ಮಹಾಜನಾಂಗ ಹುಟ್ಟುವುದು; ಅವನ ಮೂಲಕ ಈ ಲೋಕದ ಜನರೆಲ್ಲರೂ ಆಶೀರ್ವಾದ ಹೊಂದುವರು.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


ನಾನು ಅಬ್ರಹಾಮನಿಗೂ ಇಸಾಕನಿಗೂ ವಿಶೇಷವಾದ ದೇಶವನ್ನು ಕೊಟ್ಟೆನು. ಈಗ ನಾನು ಆ ದೇಶವನ್ನು ನಿನಗೆ ಕೊಡುವೆನು. ನಾನು ಆ ದೇಶವನ್ನು ನಿನ್ನ ಮುಂದಿನ ಸಂತತಿಗಳವರಿಗೆ ಕೊಡುವೆನು” ಎಂದು ಹೇಳಿದನು.


ಇಸ್ರೇಲನು ಈಜಿಪ್ಟಿನಲ್ಲಿ ಇಳಿದುಕೊಂಡನು. ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಿದನು. ಅವನ ಕುಟುಂಬವು ಬೆಳೆದು ತುಂಬ ದೊಡ್ಡದಾಯಿತು. ಅವರು ಈಜಿಪ್ಟಿನಲ್ಲಿ ಜಮೀನನ್ನು ಪಡೆದುಕೊಂಡರು ಮತ್ತು ಸುಖವಾಗಿದ್ದರು.


ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ.


ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.


ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.


ದೇವರು ಇಸ್ರೇಲರನ್ನು ಆಕಾಶದ ನಕ್ಷತ್ರದಷ್ಟು ಹೆಚ್ಚಿಸುವೆನೆಂದು ವಾಗ್ದಾನ ಮಾಡಿದ್ದ ಪ್ರಕಾರ ಇಸ್ರೇಲರ ಸಂಖ್ಯೆ ಅಪರಿಮಿತವಾಗಿತ್ತು. ಆದ್ದರಿಂದ ದಾವೀದನು ಇಪ್ಪತ್ತು ವರ್ಷ ಪ್ರಾಯದ ಮೇಲ್ಪಟ್ಟ ಗಂಡಸರನ್ನು ಮಾತ್ರ ಲೆಕ್ಕಿಸುವ ಆಲೋಚನೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು