ಆದಿಕಾಂಡ 26:5 - ಪರಿಶುದ್ದ ಬೈಬಲ್5 ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ಸಂತತಿಯನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಅಸಂಖ್ಯಾತವಾಗಿಸುತ್ತೇನೆ; ಅವರಿಗೆ ಈ ನಾಡೆಲ್ಲವನ್ನು ಕೊಡುತ್ತೇನೆ. ಜಗದ ಜನಾಂಗಗಳಿಗೆಲ್ಲ ನಿನ್ನ ಸಂತತಿಯ ಮುಖಾಂತರ ಆಶೀರ್ವಾದ ದೊರಕುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಷ್ಟಾಗಿ ಮಾಡಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ನನ್ನ ವಿಧಿಯನ್ನೂ, ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ನನ್ನ ನೇಮಗಳನ್ನೂ, ಕೈಗೊಂಡು ನಡೆದನು,” ಎಂದರು. ಅಧ್ಯಾಯವನ್ನು ನೋಡಿ |
“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.