ಆದಿಕಾಂಡ 26:7 - ಪರಿಶುದ್ದ ಬೈಬಲ್7 ಇಸಾಕನ ಹೆಂಡತಿಯಾದ ರೆಬೆಕ್ಕಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕ್ಕಳ ಬಗ್ಗೆ ಇಸಾಕನನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕ್ಕಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಲ್ಲಿಯ ಜನರು ಅವನ ಹೆಂಡತಿಯ ವಿಷಯವಾಗಿ ವಿಚಾರಿಸಿದರು. “ಅವಳು ನನ್ನ ತಂಗಿ”, ಎಂದು ಇಸಾಕನು ಹೇಳಿದನು. ರೆಬೆಕ್ಕಳು ಬಲು ಚೆಲುವೆಯಾಗಿದ್ದರಿಂದ ಆಕೆಯ ನಿಮಿತ್ತ ತನ್ನನ್ನು ಕೊಂದಾರು ಎಂದು ಹೆದರಿ ಹಾಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು, ರೆಬೆಕ್ಕಳು ನೋಟಕ್ಕೆ ಚೆಲುವೆಯಾಗಿದ್ದುದರಿಂದ ಆಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು, ಆಕೆ ತನ್ನ ಹೆಂಡತಿಯೆಂದು ಹೇಳುವುದಕ್ಕೆ ಅಂಜಿ ಅವನು, “ಆಕೆಯು ನನ್ನ ತಂಗಿ” ಎಂದನು. ಅಧ್ಯಾಯವನ್ನು ನೋಡಿ |