ಆದಿಕಾಂಡ 27:12 - ಪರಿಶುದ್ದ ಬೈಬಲ್12 ನನ್ನ ತಂದೆ ನನ್ನನ್ನು ಮುಟ್ಟಿದರೆ, ನಾನು ಏಸಾವನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ನನ್ನನ್ನು ಆಶೀರ್ವದಿಸುವುದಿಲ್ಲ. ನಾನು ಅವನನ್ನು ಮೋಸಗೊಳಿಸಲು ಪ್ರಯತ್ನಿಸಿದ್ದರಿಂದ ಅವನು ನನ್ನನ್ನು ಶಪಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಒಂದು ವೇಳೆ ತಂದೆ ನನ್ನನ್ನು ಮುಟ್ಟಿನೋಡಿಯಾರು; ನಾನು ಅವರಿಗೆ ವಂಚಕನಾಗಿ ತೋರಿಬಂದರೆ ಆಶೀರ್ವಾದಕ್ಕೆ ಬದಲಾಗಿ ಶಾಪ ಬರಮಾಡಿಕೊಳ್ಳುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಗೇಲಿಮಾಡುವವನಾಗಿ ತೋರಿಬಂದು ನನ್ನ ಮೇಲೆ ಶಾಪವನ್ನು ಬರಮಾಡಿಕೊಳ್ಳುವೆನೇ ಹೊರತು ಆಶೀರ್ವಾದವನ್ನು ಬರಮಾಡಿಕೊಳ್ಳುವದಿಲ್ಲ ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ, ನನ್ನ ಗತಿಯೇನು? ನಾನು ಅವನಿಗೆ ಮೋಸಮಾಡುವವನಾಗಿ ಕಂಡು ಬಂದು, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು,” ಎಂದನು. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.