Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:15 - ಪರಿಶುದ್ದ ಬೈಬಲ್‌

15 ಅನಂತರ ರೆಬೆಕ್ಕಳು ತನ್ನ ಹಿರಿಯ ಮಗನಾದ ಏಸಾವನಿಗೆ ಇಷ್ಟವಾದ ಉಡುಪನ್ನು ತೆಗೆದುಕೊಂಡಳು. ರೆಬೆಕ್ಕಳು ಆ ಉಡುಪನ್ನು ತನ್ನ ಕಿರಿಮಗನಾದ ಯಾಕೋಬನಿಗೆ ತೊಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತನ್ನ ಹಿರಿಯ ಮಗ ಏಸಾವನ ಬಟ್ಟೆಗಳಲ್ಲಿ ಶ್ರೇಷ್ಠವಾದವು ಮನೆಯಲ್ಲಿ ಆಕೆಯ ವಶದಲ್ಲಿದ್ದವು. ಅವುಗಳನ್ನು ತೆಗೆದು ಕಿರಿಯ ಮಗ ಯಕೋಬನಿಗೆ ತೊಡಿಸಿದಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸವಿಯೂಟವನ್ನು ಸಿದ್ಧಪಡಿಸಿದ ಮೇಲೆ ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು ತನ್ನ ಕಿರೀಮಗನಾದ ಯಾಕೋಬನಿಗೆ ಹೊದ್ದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತರುವಾಯ ರೆಬೆಕ್ಕಳು ಮನೆಯಲ್ಲಿದ್ದ ತನ್ನ ಹಿರಿಯ ಮಗನಾದ ಏಸಾವನ ಒಳ್ಳೆಯ ವಸ್ತ್ರವನ್ನು ತೆಗೆದುಕೊಂಡು, ತನ್ನ ಕಿರಿಯ ಮಗ ಯಾಕೋಬನಿಗೆ ಉಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:15
5 ತಿಳಿವುಗಳ ಹೋಲಿಕೆ  

ಅದರಂತೆಯೇ ಯಾಕೋಬನು ತಂದೆಯ ಬಳಿಗೆ ಹೋಗಿ ಅವನಿಗೆ ಮುದ್ದಿಟ್ಟನು. ಇಸಾಕನು ಅವನ ಉಡುಪಿನ ವಾಸನೆಯನ್ನು ನೋಡಿ ಅವನನ್ನು ಹೀಗೆ ಆಶೀರ್ವದಿಸಿದನು: “ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಪ್ರದೇಶಗಳಂತಿದೆ.


“ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ.


“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.


ಆದ್ದರಿಂದ ಯಾಕೋಬನು ಹೋಗಿ ಎರಡು ಆಡುಗಳನ್ನು ತೆಗೆದುಕೊಂಡು ಬಂದನು. ಇಸಾಕನಿಗೆ ಇಷ್ಟವಾದ ರುಚಿಕರವಾದ ಪದಾರ್ಥಗಳನ್ನು ಆಕೆ ಅವುಗಳ ಮಾಂಸದಿಂದ ತಯಾರಿಸಿದಳು.


ಆಡುಗಳ ಚರ್ಮವನ್ನು ಯಾಕೋಬನ ಕೈಗಳಿಗೂ ಕೊರಳಿಗೂ ಸುತ್ತಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು