Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:18 - ಪರಿಶುದ್ದ ಬೈಬಲ್‌

18 ಯಾಕೋಬನು ತನ್ನ ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆದನು. ಅವನ ತಂದೆ, “ಏನು ಮಗನೇ, ನೀನು ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆಯಲು, ತಂದೆಯು, “ಏನು ಮಗನೇ, ನೀನು ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಕೋಬನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆದನು. ತಂದೆಯು, “ಏನು ಮಗನೇ, ನೀನು ಯಾವ ಮಗನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ತಂದೆಯ ಬಳಿಗೆ ಹೋಗಿ - ಅಪ್ಪಾ ಎಂದು ಹೇಳಲು ತಂದೆಯು - ಏನು ಮಗನೇ, ನೀನು ಯಾರು ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ, “ನನ್ನ ತಂದೆಯೇ,” ಎಂದನು. ಅದಕ್ಕೆ ಅವನು, “ನೀನು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:18
5 ತಿಳಿವುಗಳ ಹೋಲಿಕೆ  

ಅನಂತರ ಆಕೆ ತಾನು ಸಿದ್ಧಪಡಿಸಿದ್ದ ಅಡಿಗೆಯನ್ನು ಯಾಕೋಬನಿಗೆ ಕೊಟ್ಟಳು.


ಯಾಕೋಬನು ತನ್ನ ತಂದೆಗೆ, “ನಾನು ಏಸಾವ, ನಿನ್ನ ಮೊದಲನೆ ಮಗ. ನೀನು ಹೇಳಿದಂತೆ ನಾನು ಮಾಡಿಕೊಂಡು ಬಂದಿದ್ದೇನೆ. ನಾನು ನಿನಗೋಸ್ಕರ ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ಕುಳಿತುಕೊಂಡು ತಿನ್ನು. ಅನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.


ಇಸಾಕನು ಅವನಿಗೆ, “ನೀನು ಯಾರು?” ಎಂದು ಕೇಳಿದನು. ಅವನು, “ನಾನು ನಿನ್ನ ಹಿರಿಯಮಗನಾದ ಏಸಾವ” ಎಂದು ಹೇಳಿದನು.


ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. ಯೋಸೇಫನು, “ಸರಿ, ಹೋಗುವೆನು” ಎಂದು ಉತ್ತರಿಸಿದನು.


ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು