ಆದಿಕಾಂಡ 27:2 - ಪರಿಶುದ್ದ ಬೈಬಲ್2 ಇಸಾಕನು ಅವನಿಗೆ, “ನನಗೆ ವಯಸ್ಸಾಯಿತು. ನಾನು ಬಹುಬೇಗನೆ ಸಾಯಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸಾಕನು ಅವನಿಗೆ, “ನಾನು ಮುದುಕನಾಗಿದ್ದೇನೆ; ಯಾವಾಗ ಸಾಯುವೆನೋ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸಾಕನು ಅವನಿಗೆ, “ನೋಡು, ನಾನು ಮುದುಕನಾಗಿಬಿಟ್ಟೆ. ಯಾವಾಗ ಸಾಯುತ್ತೇನೋ ಗೊತ್ತಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸಾಕನು ಅವನಿಗೆ - ನಾನು ಮುದುಕನಾದೆನಷ್ಟೆ; ಯಾವಾಗ ಸಾಯುವೆನೋ ಗೊತ್ತಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಇಸಾಕನು, “ಇಗೋ, ಈಗ ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.
ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.