Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:20 - ಪರಿಶುದ್ದ ಬೈಬಲ್‌

20 ಆದರೆ ಇಸಾಕನು ತನ್ನ ಮಗನಿಗೆ, “ನೀನು ಇಷ್ಟು ಬೇಗನೆ ಬೇಟೆಯಾಡಿಕೊಂಡು ಬಂದೆಯಾ?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ನಾನು ಬಹುಬೇಗನೆ ಪ್ರಾಣಿಗಳನ್ನು ಕಂಡುಕೊಳ್ಳುವಂತೆ ನಿನ್ನ ದೇವರಾದ ಯೆಹೋವನು ಸಹಾಯ ಮಾಡಿದನು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಸಾಕನು, “ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು” ಎಂದು ಕೇಳಿದ್ದಕ್ಕೆ ಅವನು, “ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಸಾಕನು, “ಏನು ಮಗನೇ, ಇಷ್ಟು ಬೇಗನೆ ಬೇಟೆ ಹೇಗೆ ಸಿಕ್ಕಿತು?” ಎಂದು ಕೇಳಿದನು. ಯಕೋಬನು, “ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನನ್ನೆದುರಿಗೆ ಬರಮಾಡಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಏನು ಮಗನೇ, ಇಷ್ಟು ಬೇಗ ಹೇಗೆ ಸಿಕ್ಕಿತು ಎಂದು ಕೇಳಿದ್ದಕ್ಕೆ ಅವನು - ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು ಅಂದನು. ಇಸಾಕನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಸಾಕನು ತನ್ನ ಮಗನಿಗೆ, “ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು?” ಎಂದನು. ಅವನು, “ನಿನ್ನ ದೇವರಾದ ಯೆಹೋವ ದೇವರು ನನ್ನೆದುರಿಗೆ ಅದು ಬರುವಂತೆ ಮಾಡಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:20
4 ತಿಳಿವುಗಳ ಹೋಲಿಕೆ  

ನೀವು ದೇವರಿಗಾಗಿ ಸುಳ್ಳಾಡುವಿರಾ? ಆತನಿಗಾಗಿ ಅನ್ಯಾಯದ ವಾದಗಳನ್ನು ಬಳಸುವಿರಾ?


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.


ಬಳಿಕ ಇಸಾಕನು ಯಾಕೋಬನಿಗೆ, “ನನ್ನ ಬಳಿಗೆ ಬಾ, ನನ್ನ ಮಗನನ್ನು ನಾನು ಮುಟ್ಟಿ ತಿಳಿದುಕೊಳ್ಳಬಲ್ಲೆ. ನಾನು ನಿನ್ನನ್ನು ಮುಟ್ಟಿದರೆ, ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಲ್ಲೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು