ಆದಿಕಾಂಡ 27:24 - ಪರಿಶುದ್ದ ಬೈಬಲ್24 ಇಸಾಕನು ಅವನಿಗೆ, “ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ಹೌದು, ನಾನೇ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು, “ನೀನು ನಿಜವಾದ ನನ್ನ ಮಗನಾದ ಏಸಾವನೋ” ಎಂದು ಕೇಳಿದ್ದಕ್ಕೆ ಯಾಕೋಬನು, “ಹೌದು” ಎನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೂ ಮರಳಿ, “ನೀನು ನಿಶ್ಚಯವಾಗಿ ನನ್ನ ಮಗ ಏಸಾವನೋ” ಎಂದು ಕೇಳಿದನು. ಯಕೋಬನು “ಹೌದು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವನು - ನೀನು ನಿಜವಾಗಿ ನನ್ನ ಮಗನಾದ ಏಸಾವನೋ ಎಂದು ಕೇಳಿದ್ದಕ್ಕೆ ಯಾಕೋಬನು - ಹೌದು ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮತ್ತೆ ಅವನು, “ನೀನು ನನ್ನ ಮಗ ಏಸಾವನೋ?” ಎಂದಾಗ. ಯಾಕೋಬನು, “ನಾನೇ,” ಎಂದನು. ಅಧ್ಯಾಯವನ್ನು ನೋಡಿ |
ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.