Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:31 - ಪರಿಶುದ್ದ ಬೈಬಲ್‌

31 ಏಸಾವನು ಸಹ ತನ್ನ ತಂದೆಗೆ ಇಷ್ಟವಾದ ರೀತಿಯಲ್ಲಿ ವಿಶೇಷವಾದ ಆಹಾರವನ್ನು ಸಿದ್ಧಪಡಿಸಿ ತನ್ನ ತಂದೆಯ ಬಳಿಗೆ ತೆಗೆದುಕೊಂಡು ಬಂದನು. ಅವನು ತನ್ನ ತಂದೆಗೆ, “ಅಪ್ಪಾ ಎದ್ದೇಳು, ನಿನಗೋಸ್ಕರ ನಿನ್ನ ಮಗನು ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ತಿನ್ನು, ನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನು ಕೂಡ ಸವಿ ಊಟವನ್ನು ಅಣಿಮಾಡಿ ತಂದೆಯ ಬಳಿಗೆ ತಂದು, “ಅಪ್ಪಾ, ಏಳಿ; ನಿನ್ನ ಮಗನಾದ ನಾನು ತಂದಿರುವ ಬೇಟೆಯ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ - ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನೂ ಸಹ ರುಚಿಯಾದ ಊಟವನ್ನು ಸಿದ್ಧಮಾಡಿ, ತನ್ನ ತಂದೆಯ ಬಳಿಗೆ ತಂದು, “ನನ್ನ ತಂದೆಯೇ, ಎದ್ದು ನನ್ನನ್ನು ಆಶೀರ್ವದಿಸುವಂತೆ ನಿನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:31
4 ತಿಳಿವುಗಳ ಹೋಲಿಕೆ  

ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು.


ಯಾಕೋಬನು ತನ್ನ ತಂದೆಗೆ, “ನಾನು ಏಸಾವ, ನಿನ್ನ ಮೊದಲನೆ ಮಗ. ನೀನು ಹೇಳಿದಂತೆ ನಾನು ಮಾಡಿಕೊಂಡು ಬಂದಿದ್ದೇನೆ. ನಾನು ನಿನಗೋಸ್ಕರ ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ಕುಳಿತುಕೊಂಡು ತಿನ್ನು. ಅನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.


ಇಸಾಕನು ಯಾಕೋಬನನ್ನು ಆಶೀರ್ವದಿಸಿದ ಬಳಿಕ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಯಿಂದ ಹೊರಟುಹೋಗುವಷ್ಟರಲ್ಲಿ ಏಸಾವನು ಬೇಟೆಯಿಂದ ಬಂದನು.


ಆದ್ದರಿಂದ ಯಾಕೋಬನು ಹೋಗಿ ಎರಡು ಆಡುಗಳನ್ನು ತೆಗೆದುಕೊಂಡು ಬಂದನು. ಇಸಾಕನಿಗೆ ಇಷ್ಟವಾದ ರುಚಿಕರವಾದ ಪದಾರ್ಥಗಳನ್ನು ಆಕೆ ಅವುಗಳ ಮಾಂಸದಿಂದ ತಯಾರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು