ಆದಿಕಾಂಡ 27:35 - ಪರಿಶುದ್ದ ಬೈಬಲ್35 ಇಸಾಕನು, “ನಿನ್ನ ತಮ್ಮನು ನನ್ನನ್ನು ಮೋಸಗೊಳಿಸಿದನು; ಅವನು ಬಂದು ನಿನ್ನ ಆಶೀರ್ವಾದವನ್ನು ತೆಗೆದುಕೊಂಡನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 “ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇಸಾಕನು, “ನಿನ್ನ ತಮ್ಮ ಮೋಸದಿಂದ ಬಂದು ನಿನಗಾಗಬೇಕಿದ್ದ ಆಶೀರ್ವಾದವನ್ನು ಪಡೆದುಕೊಂಡು ಹೋದನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇಸಾಕನು - ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡಕೊಂಡನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇಸಾಕನು, “ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತೆಗೆದುಕೊಂಡಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿ |
ಬಾಳನ ಎಲ್ಲಾ ಯಾಜಕರನ್ನೂ ಪ್ರವಾದಿಗಳನ್ನೂ ಕರೆಯಿರಿ. ಬಾಳನನ್ನು ಆರಾಧಿಸುವ ಜನರೆಲ್ಲರನ್ನೂ ಒಟ್ಟಾಗಿ ಕರೆಯಿರಿ. ಯಾರೂ ಈ ಸಭೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ. ನಾನು ಬಾಳನಿಗೆ ಮಹಾಯಜ್ಞವನ್ನು ಅರ್ಪಿಸಬೇಕೆಂದಿದ್ದೇನೆ. ಈ ಸಭೆಗೆ ಯಾರಾದರೂ ಬಾರದೆ ಇದ್ದರೆ ಅವರನ್ನು ನಾನು ಕೊಂದುಹಾಕುತ್ತೇನೆ!” ಎಂದು ಹೇಳಿದನು. ಆದರೆ ಅದು ಯೇಹುವಿನ ತಂತ್ರವಾಗಿತ್ತು. ಬಾಳನ ಭಕ್ತರನ್ನು ನಾಶಪಡಿಸಬೇಕೆಂಬುದೇ ಅವನ ಅಪೇಕ್ಷೆಯಾಗಿತ್ತು.