ಆದಿಕಾಂಡ 27:36 - ಪರಿಶುದ್ದ ಬೈಬಲ್36 ಏಸಾವನು, “ಅವನ ಹೆಸರು ಯಾಕೋಬ (ಮೋಸಗಾರ). ಅದೇ ಅವನಿಗೆ ಸರಿಯಾದ ಹೆಸರು. ಅವನು ಎರಡು ಸಲ ನನಗೆ ಮೋಸಮಾಡಿದನು. ನನ್ನ ಚೊಚ್ಚಲತನದ ಹಕ್ಕನ್ನು ತೆಗೆದುಕೊಂಡನು. ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡನು” ಎಂದು ಹೇಳಿದನು. ನಂತರ ಏಸಾವನು, “ನನಗೋಸ್ಕರ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅದಕ್ಕೆ ಏಸಾವನು, “ಯಕೋಬ’ ಎಂಬ ಹೆಸರು ಅವನಿಗೆ ತಕ್ಕುದಾಗಿದೆ; ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ. ಹಿಂದೆ ನನ್ನ ಜ್ಯೇಷ್ಠತನದ ಹಕ್ಕನ್ನು ಅಪಹರಿಸಿದ; ಈಗ ನನಗೆ ಬರಬೇಕಾಗಿದ್ದ ಆಶೀರ್ವಾದವನ್ನು ಕಿತ್ತುಕೊಂಡಿದ್ದಾನೆ,” ಎಂದು ಹೇಳಿ ತನ್ನ ತಂದೆಯನ್ನು ನೋಡಿ, “ನನಗೆಂದೇ ನಿಮ್ಮಲ್ಲಿ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅದಕ್ಕೆ ಏಸಾವನು - ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ ಎಂದು ಹೇಳಿ ತನ್ನ ತಂದೆಯನ್ನು - ನನಗೋಸ್ಕರವೂ ನಿನ್ನಲ್ಲಿ ಆಶೀರ್ವಾದವಿಲ್ಲವೋ ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅದಕ್ಕೆ ಏಸಾವನು, “ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ? ಅವನು ನನ್ನನ್ನು ಎರಡು ಸಾರಿ ವಂಚಿಸಿದ್ದಾನೆ. ಅವನು ನನ್ನ ಚೊಚ್ಚಲತನವನ್ನು ತೆಗೆದುಕೊಂಡಿದ್ದಾನೆ. ಇಗೋ, ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸಲಿಲ್ಲವೋ?” ಎಂದನು. ಅಧ್ಯಾಯವನ್ನು ನೋಡಿ |