Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:37 - ಪರಿಶುದ್ದ ಬೈಬಲ್‌

37 ಇಸಾಕನು, “ಇಲ್ಲ, ತುಂಬ ತಡವಾಯಿತು. ನಿನ್ನ ಮೇಲೆ ಆಡಳಿತ ಮಾಡುವ ಅಧಿಕಾರವನ್ನು ನಾನು ಯಾಕೋಬನಿಗೆ ಕೊಟ್ಟಿದ್ದೇನೆ. ಅವನ ಸಹೋದರರೆಲ್ಲ ಅವನಿಗೆ ಸೇವಕರಾಗಿರುವರು ಎಂದು ನಾನು ಹೇಳಿದ್ದೇನೆ. ಅವನಿಗೆ ಬೇಕಾದಷ್ಟು ದವಸಧಾನ್ಯಗಳೂ ದ್ರಾಕ್ಷಾರಸವೂ ದೊರೆಯುವಂತೆ ಆಶೀರ್ವಾದ ಮಾಡಿದ್ದೇನೆ. ನಿನಗೆ ಕೊಡಲು ನನ್ನಲ್ಲಿ ಏನೂ ಉಳಿದಿಲ್ಲ ಮಗನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇಸಾಕನು - ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇವಿುಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇಸಾಕನು ಉತ್ತರವಾಗಿ ಏಸಾವನಿಗೆ, “ಅವನನ್ನು ನಿನಗೆ ದೊರೆಯನನ್ನಾಗಿ ನೇಮಿಸಿದ್ದೇನೆ, ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕರನ್ನಾಗಿ ಕೊಟ್ಟು, ಧಾನ್ಯದಿಂದಲೂ ಹೊಸ ದ್ರಾಕ್ಷಾರಸದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:37
6 ತಿಳಿವುಗಳ ಹೋಲಿಕೆ  

ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.


ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.


ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.


ರಾಜನಾದ ಯೆಹೋಷಾಫಾಟನು ಸರಕು ಸಾಗಿಸುವ ಹಡಗುಗಳನ್ನು ತಯಾರಿಸಿದನು. ಯೆಹೋಷಾಫಾಟನು ಓಫೀರ್ ದೇಶದಿಂದ ಬಂಗಾರವನ್ನು ತರುವುದಕ್ಕಾಗಿ ಈ ಹಡಗುಗಳನ್ನು ಕಳುಹಿಸಿದನು. ಆದರೆ ಆ ಹಡಗುಗಳು ತಮ್ಮ ಸ್ವಂತ ಬಂದರಾದ ಎಚ್ಯೋನ್ಗೆಬೆರಿನಲ್ಲಿ ನಾಶವಾದವು. ಅವು ಓಫೀರ್ ದೇಶವನ್ನು ಮುಟ್ಟಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು