ಆದಿಕಾಂಡ 27:41 - ಪರಿಶುದ್ದ ಬೈಬಲ್41 ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿವಿುತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ - ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು; ಆಗ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು. ಅಧ್ಯಾಯವನ್ನು ನೋಡಿ |