ಆದಿಕಾಂಡ 27:46 - ಪರಿಶುದ್ದ ಬೈಬಲ್46 ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಆ ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅನಂತರ ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಹೆಣ್ಣುಗಳ ದೆಸೆಯಿಂದ ನನ್ನ ಬಾಳು ಬೇಸರವಾಗಿದೆ. ಯಕೋಬನು ಕೂಡ ಈ ನಾಡಿನ ಹೆಣ್ಣನ್ನು ಆರಿಸಿಕೊಂಡು ಇಂಥ ಹಿತ್ತಿಯ ಹುಡುಗಿಯನ್ನೇ ಮದುವೆಮಾಡಿಕೊಂಡರೆ ನಾನು ಇನ್ನು ಬದುಕಿ ಪ್ರಯೋಜನ ಇಲ್ಲ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ರೆಬೆಕ್ಕಳು ಇಸಾಕನಿಗೆ - ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಯಿತು. ಯಾಕೋಬನೂ ಈ ದೇಶದವರಲ್ಲಿ ಹೆಣ್ಣನ್ನು ಆದುಕೊಂಡು ಇಂಥಾ ಹಿತ್ತಿಯ ಸ್ತ್ರೀಯನ್ನು ಮದುವೆಮಾಡಿಕೊಂಡರೆ ನಾನು ಇನ್ನೂ ಬದುಕುವದರಿಂದ ಪ್ರಯೋಜನವೇನು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ರೆಬೆಕ್ಕಳು ಇಸಾಕನಿಗೆ, “ಹಿತ್ತಿಯ ಸ್ತ್ರೀಯರ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ. ಇಂಥ ಹಿತ್ತಿಯ ಸ್ತ್ರೀಯರಲ್ಲಿ ಒಬ್ಬಳನ್ನು ತನ್ನ ಹೆಂಡತಿಯಾಗಿ ಯಾಕೋಬನು ಮದುವೆ ಮಾಡಿಕೊಂಡರೆ, ನಾನು ಬದುಕಿರುವುದು ವ್ಯರ್ಥ,” ಎಂದಳು. ಅಧ್ಯಾಯವನ್ನು ನೋಡಿ |