ಆದಿಕಾಂಡ 28:15 - ಪರಿಶುದ್ದ ಬೈಬಲ್15 “ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.