ಆದಿಕಾಂಡ 28:16 - ಪರಿಶುದ್ದ ಬೈಬಲ್16 ಆಗ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ಖಂಡಿತವಾಗಿಯೂ ಈ ಸ್ಥಳದಲ್ಲಿ ದೇವರಿದ್ದಾನೆ, ಆದರೆ ಅದು ನನಗೆ ಗೊತ್ತಿರಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯಕೋಬನು ನಿದ್ರೆಯಿಂದ ಎಚ್ಚೆತ್ತನು. "ನಿಶ್ಚಯವಾಗಿ ಸರ್ವೇಶ್ವರ ಈ ಸ್ಥಳದಲ್ಲಿದ್ದಾರೆ; ಇದು ನನಗೆ ತಿಳಿಯದೆಹೋಯಿತು!” ಎಂದುಕೊಂಡನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಕೋಬನು ನಿದ್ದೆಯಿಂದ ಎಚ್ಚತ್ತು - ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ಇದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ನಿಶ್ಚಯವಾಗಿ ಈ ಸ್ಥಳದಲ್ಲಿ ಯೆಹೋವ ದೇವರು ಇದ್ದಾರೆ. ಇದನ್ನು ನಾನು ಅರಿಯಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.