Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:18 - ಪರಿಶುದ್ದ ಬೈಬಲ್‌

18 ಯಾಕೋಬನು ಮರುದಿನ ಮುಂಜಾನೆ ಬೇಗನೆ ಎದ್ದು, ತಾನು ಮಲಗಿಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಕಂಬವಾಗಿ ನೆಲದಲ್ಲಿ ನಿಲ್ಲಿಸಿದನು. ನಂತರ ಆ ಕಲ್ಲಿನ ಮೇಲೆ ಎಣ್ಣೆಯನ್ನು ಸುರಿದನು. ಹೀಗೆ ಅವನು ಆ ಕಲ್ಲನ್ನು ದೇವರ ನೆನಪಿಗಾಗಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಕೋಬನು ಬೆಳಗಿನ ಜಾವದಲ್ಲಿ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಆ ಕಲ್ಲನ್ನು ಸ್ಮಾರಕಸ್ತಂಭವಾಗಿ ನೆಟ್ಟನು. ಅದರ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೊತ್ತಾರೆ ಅವನು ಎದ್ದಾಗ ತಾನು ತಲೆಗಿಂಬಿಗೆ ಇಟ್ಟುಕೊಂಡಿದ್ದ ಕಲ್ಲನ್ನು ಕಂಬವಾಗಿ ನಿಲ್ಲಿಸಿ ಅದರ ತುದಿಯಲ್ಲಿ ಎಣ್ಣೇ ಹೊಯಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಕೋಬನು ಬೆಳಿಗ್ಗೆ ಎದ್ದು, ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು, ಅದನ್ನು ಸ್ತಂಭವಾಗಿ ನೆಟ್ಟು, ಅದರ ಮೇಲೆ ಎಣ್ಣೆಯನ್ನು ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:18
16 ತಿಳಿವುಗಳ ಹೋಲಿಕೆ  

ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷವಾದ ಸ್ಥಳ. ಯಾಕೆಂದರೆ ಅಲ್ಲಿ ದೇವರು ಯಾಕೋಬನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.


ಅಂತೆಯೇ ಯಾಕೋಬನು ಮಾಡಿಕೊಂಡ ಒಪ್ಪಂದಕ್ಕೆ ಸಾಕ್ಷಿಯಾಗಿ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಬಂದು ಅಲ್ಲಿಟ್ಟನು.


ಯಾಕೋಬನು ರಾಹೇಲಳ ಗೌರವಾರ್ಥವಾಗಿ ಆಕೆಯ ಸಮಾಧಿಯ ಮೇಲೆ ವಿಶೇಷವಾದ ಒಂದು ಕಲ್ಲನ್ನು ಇಟ್ಟನು. ಇಂದಿಗೂ ಆ ವಿಶೇಷವಾದ ಕಲ್ಲು ಅಲ್ಲಿದೆ.


ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಆ ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ’ ಎಂದು ತಿಳಿಸಿದನು” ಎಂಬುದಾಗಿ ಹೇಳಿದನು.


ಆ ಸಮಯದಲ್ಲಿ ಈಜಿಪ್ಟಿನ ಮಧ್ಯದಲ್ಲಿ ಯೆಹೋವನಿಗಾಗಿ ಒಂದು ವೇದಿಕೆ ಇರುವದು. ಈಜಿಪ್ಟಿನ ಗಡಿಯಲ್ಲಿ ಯೆಹೋವನ ಗೌರವಾರ್ಥವಾಗಿ ಸ್ಮಾರಕಸ್ತಂಭ ಇರುವದು.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ತಡಮಾಡದೆ ಬೇಗನೆ ಹಿಂತಿರುಗಿದೆನು.


ಅಬ್ಷಾಲೋಮನು ಬದುಕಿದ್ದಾಗ, ರಾಜನ ಕಣಿವೆಯಲ್ಲಿ ಒಂದು ಸ್ತಂಭವನ್ನು ನೆಡಿಸಿದ್ದನು. ಅಬ್ಷಾಲೋಮನು, “ನನ್ನ ಹೆಸರನ್ನು ಜೀವಂತವಾಗಿರಿಸಲು ನನಗೆ ಗಂಡುಮಕ್ಕಳಿಲ್ಲ” ಎಂದು ಹೇಳಿ ಆ ಸ್ತಂಭಕ್ಕೆ ತನ್ನ ಹೆಸರನ್ನೇ ಕೊಟ್ಟಿದ್ದನು. ಆ ಸ್ತಂಭವನ್ನು “ಅಬ್ಷಾಲೋಮನ ಸ್ಮಾರಕಸ್ತಂಭ” ಎಂದು ಇಂದಿಗೂ ಕರೆಯುತ್ತಾರೆ.


ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


ಮೋಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.


ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.


ಯಾಕೋಬನು ಪ್ರಯಾಣ ಮಾಡುತ್ತಿರುವಾಗ ಸೂರ್ಯಾಸ್ತವಾಯಿತು. ಆದ್ದರಿಂದ ಯಾಕೋಬನು ಆ ರಾತ್ರಿ ಇಳಿದುಕೊಳ್ಳಲು ಒಂದು ಸ್ಥಳಕ್ಕೆ ಹೋದನು. ಯಾಕೋಬನು ಆ ಸ್ಥಳದಲ್ಲಿ ಒಂದು ಕಲ್ಲನ್ನು ಕಂಡು ಅದರ ಮೇಲೆ ತಲೆಯಿಟ್ಟು ಮಲಗಿಕೊಂಡನು.


(ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ಜೋರ್ಡನ್ ನದಿಯ ಮಧ್ಯದಲ್ಲಿ ಅಂದರೆ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುವಾಗ ಯಾಜಕರು ನಿಂತಿದ್ದ ಸ್ಥಳದಲ್ಲಿ ಇಟ್ಟನು. ಆ ಕಲ್ಲುಗಳು ಇಂದಿಗೂ ಆ ಸ್ಥಳದಲ್ಲಿವೆ.)


ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು