Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:22 - ಪರಿಶುದ್ದ ಬೈಬಲ್‌

22 ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ನಾನು ಕಂಬವಾಗಿ ನಿಲ್ಲಿಸಿರುವ ಈ ಕಲ್ಲು ದೇವರ ಮನೆಯಾಗುವದು. ಇದಲ್ಲದೆ ನಿನ್ನಿಂದ ನನಗೆ ಬರುವ ಎಲ್ಲಾ ಆಸ್ತಿಯಲ್ಲಿ ಹತ್ತರಲ್ಲೊಂದು ಪಾಲನ್ನು ನಿನಗೆ ಸಮರ್ಪಿಸುವೆನೆಂಬದಾಗಿ ಮಾತುಕೊಡುತ್ತೇನೆ ಎಂದು ಹರಕೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:22
13 ತಿಳಿವುಗಳ ಹೋಲಿಕೆ  

ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಆ ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಆ ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.


ನಿನ್ನ ಶತ್ರುಗಳನ್ನು ಸೋಲಿಸಲು ನಿನಗೆ ಸಹಾಯ ಮಾಡಿದ ಮಹೋನ್ನತನಾದ ದೇವರಿಗೆ ಕೊಂಡಾಟವಾಗಲಿ.” ಅಬ್ರಾಮನು ಯುದ್ಧದಿಂದ ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕೀಚೆದೆಕನಿಗೆ ಕೊಟ್ಟನು.


ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.


ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.


ಯಾಕೋಬನಿಗೆ ಭಯವಾಗಿತ್ತು. ಅವನು, “ಇದು ತುಂಬ ಮಹತ್ವವಾದ ಸ್ಥಳ. ಇದು ದೇವರ ಮನೆ. ಇದು ಸ್ವರ್ಗಕ್ಕೆ ಬಾಗಿಲು” ಎಂದು ಹೇಳಿದನು.


ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.


ಅಬ್ರಹಾಮನು ಬೇರ್ಷೆಬದಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಆ ಸ್ಥಳದಲ್ಲಿ ಅವನು ಸದಾಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು.


ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು.


ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು