ಆದಿಕಾಂಡ 28:9 - ಪರಿಶುದ್ದ ಬೈಬಲ್9 ಏಸಾವನಿಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದರು. ಆದರೂ ಅವನು ಇಷ್ಮಾಯೇಲನ ಬಳಿಗೆ ಹೋಗಿ ಅವನ ಮಗಳಾದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡನು. ಇಷ್ಮಾಯೇಲನು ಅಬ್ರಹಾಮನ ಮಗನು. ಮಹಲತಳು ನೆಬಾಯೋತನ ತಂಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತನಗೆ ಈಗಾಗಲೇ ಇದ್ದ ಹೆಂಡತಿಯರ ಜೊತೆಗೆ ಅಬ್ರಹಾಮನ ಮಗನಾದ ಇಷ್ಮಾಯೇಲನ ಬಳಿಗೆ ಹೋಗಿ, ಅವನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನಾದ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ತನ್ನ ಹೆಂಡರಲ್ಲಿ ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ಇಷ್ಮಾಯೇಲನ ಬಳಿಗೆ ಹೋಗಿ, ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗ ಇಷ್ಮಾಯೇಲನ ಮಗಳೂ, ನೆಬಾಯೋತನ ತಂಗಿಯೂ ಆಗಿರುವ ಮಹಲತ್ ಎಂಬವಳನ್ನೂ ಮದುವೆಮಾಡಿಕೊಂಡನು. ಅಧ್ಯಾಯವನ್ನು ನೋಡಿ |