Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:10 - ಪರಿಶುದ್ದ ಬೈಬಲ್‌

10 ರಾಹೇಲಳು ಲಾಬಾನನ ಮಗಳು. ಲಾಬಾನನು ಯಾಕೋಬನ ತಾಯಿಯಾದ ರೆಬೆಕ್ಕಳ ಅಣ್ಣ. ಯಾಕೋಬನು ರಾಹೇಲಳನ್ನು ನೋಡಿದಾಗ ಬಾವಿಯ ಮೇಲಿದ್ದ ಕಲ್ಲನ್ನು ತೆಗೆದುಹಾಕಿ ತನ್ನ ತಾಯಿಯ ಅಣ್ಣನಾದ ಲಾಬಾನನ ಕುರಿಗಳಿಗೆ ನೀರು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತನ್ನ ಸೋದರಮಾವ ಲಾಬಾನನ ಮಗಳಾದ ಆ ರಾಖೇಲಳನ್ನೂ ಅವನ ಕುರಿಗಳನ್ನೂ ಕಂಡ ಕೂಡಲೆ ಯಕೋಬನು ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲಿದ್ದ ಕಲ್ಲನ್ನು ಸರಿಸಿ ಸೋದರಮಾವನ ಆ ಕುರಿಗಳಿಗೆ ನೀರು ಕುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಕೋಬನು ತನ್ನ ಸೋದರಮಾವನಾದ ಲಾಬಾನನ ಮಗಳಾಗಿರುವ ರಾಹೇಲಳನ್ನೂ ತನ್ನ ಸೋದರಮಾವನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ತನ್ನ ಸೋದರಮಾವನ ಕುರಿಗಳಿಗೆ ನೀರು ಕುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯಾಕೋಬನು ತನ್ನ ತಾಯಿಯ ಸಹೋದರ ಲಾಬಾನನ ಮಗಳಾದ ರಾಹೇಲಳನ್ನೂ, ಅವಳ ಕುರಿಗಳನ್ನೂ ನೋಡಿದಾಗ, ಯಾಕೋಬನು ಹತ್ತಿರ ಬಂದು, ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ, ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:10
4 ತಿಳಿವುಗಳ ಹೋಲಿಕೆ  

ಅಷ್ಟರಲ್ಲಿ ಅಲ್ಲಿಗೆ ಬಂದ ಕೆಲವು ಕುರುಬರು ನೀರು ಸೇದಲು ಅವರಿಗೆ ಅಡ್ಡಿಮಾಡಿದ್ದರಿಂದ ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರು ಕುಡಿಸಿದನು.


ಯಾಕೋಬನು ಕುರುಬರೊಡನೆ ಮಾತಾಡುತ್ತಿರುವಾಗ ರಾಹೇಲಳು ತನ್ನ ತಂದೆಯ ಕುರಿಗಳೊಡನೆ ಬಂದಳು. (ಕುರಿಗಳನ್ನು ನೋಡಿಕೊಳ್ಳುವುದು ರಾಹೇಲಳ ಕೆಲಸವಾಗಿತ್ತು.)


ಬಳಿಕ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಅತ್ತನು.


ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು