Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:11 - ಪರಿಶುದ್ದ ಬೈಬಲ್‌

11 ಬಳಿಕ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಜೋರಾಗಿ ಅತ್ತು ಆಕೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ ರಾಖೇಲಳಿಗೆ ಮುದ್ದಿಟ್ಟನು; ಸಂತೋಷ ಉಕ್ಕಿಬಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ರಾಹೇಲಳಿಗೆ ಮುದ್ದಿಟ್ಟು ಸ್ವರವೆತ್ತಿ ಕಣ್ಣೀರುಸುರಿಸಿ ಆಕೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು, ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:11
10 ತಿಳಿವುಗಳ ಹೋಲಿಕೆ  

ಏಸಾವನು ಯಾಕೋಬನನ್ನು ಕಂಡಾಗ, ಓಡಿಬಂದು ತನ್ನ ಕೈಗಳಿಂದ ತಬ್ಬಿಕೊಂಡು ಅವನ ಕೊರಳಿನ ಮೇಲೆ ಮುದ್ದಿಟ್ಟನು; ಅವರಿಬ್ಬರೂ ಕಣ್ಣೀರು ಸುರಿಸಿದರು.


ಆಮೇಲೆ ಯೋಸೇಫನು ಗಟ್ಟಿಯಾಗಿ ಅತ್ತನು. ಫರೋಹನ ಮನೆಯಲ್ಲಿದ್ದ ಈಜಿಪ್ಟಿನವರೆಲ್ಲ ಅದನ್ನು ಕೇಳಿಸಿಕೊಂಡರು.


ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು.


ನೀವು ಪರಸ್ಪರ ಸಂಧಿಸುವಾಗ ಪವಿತ್ರವಾದ ಮುದ್ದನ್ನಿಟ್ಟು ವಂದಿಸಿರಿ. ಕ್ರಿಸ್ತನ ಸಭೆಗಳವರೆಲ್ಲಾ ನಿಮಗೆ ವಂದನೆ ತಿಳಿಸುತ್ತಾರೆ.


ಯೆಹೋವನು ಆರೋನನೊಡನೆ ಮಾತಾಡಿ ಅವನಿಗೆ, “ಅರಣ್ಯಕ್ಕೆ ಹೋಗಿ ಮೋಶೆಯನ್ನು ಭೇಟಿಯಾಗು” ಎಂದು ಹೇಳಿದ್ದನು. ಆದ್ದರಿಂದ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಭೇಟಿಯಾದನು. ಆರೋನನು ಮೋಶೆಯನ್ನು ಕಂಡು ಅವನಿಗೆ ಮುದ್ದಿಟ್ಟನು.


ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.


ಬಳಿಕ ಇಸಾಕನು ಅವನಿಗೆ, “ಮಗನೇ, ನನ್ನ ಬಳಿಗೆ ಬಂದು ನನಗೆ ಮುದ್ದಿಡು” ಅಂದನು.


ಆದ್ದರಿಂದ ಮೋಶೆ ತನ್ನ ಮಾವನನ್ನು ಭೇಟಿಯಾಗಲು ಹೊರಗೆ ಹೋದನು. ಮೋಶೆ ಅವನ ಮುಂದೆ ತಲೆಬಾಗಿ ಅವನಿಗೆ ಮುದ್ದಿಟ್ಟನು. ಅವರಿಬ್ಬರು ಪರಸ್ಪರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡರು. ಬಳಿಕ ಅವರು ಹೆಚ್ಚು ಮಾತಾಡಲು ಮೋಶೆಯ ಡೇರೆಯೊಳಕ್ಕೆ ಹೋದರು.


ರಾಹೇಲಳು ಲಾಬಾನನ ಮಗಳು. ಲಾಬಾನನು ಯಾಕೋಬನ ತಾಯಿಯಾದ ರೆಬೆಕ್ಕಳ ಅಣ್ಣ. ಯಾಕೋಬನು ರಾಹೇಲಳನ್ನು ನೋಡಿದಾಗ ಬಾವಿಯ ಮೇಲಿದ್ದ ಕಲ್ಲನ್ನು ತೆಗೆದುಹಾಕಿ ತನ್ನ ತಾಯಿಯ ಅಣ್ಣನಾದ ಲಾಬಾನನ ಕುರಿಗಳಿಗೆ ನೀರು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು