ಆದಿಕಾಂಡ 29:13 - ಪರಿಶುದ್ದ ಬೈಬಲ್13 ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಲಾಬಾನನು ತನ್ನ ಸೋದರಳಿಯ ಬಂದ ಸುದ್ದಿಯನ್ನು ಕೇಳಿ ಅವನನ್ನು ಎದುರುಗೊಳ್ಳಲು ಓಡಿಬಂದನು. ಯಕೋಬನನ್ನು ಅಪ್ಪಿಕೊಂಡು ಮುದ್ದಿಟ್ಟು, ಮನೆಗೆ ಕರೆದುಕೊಂಡು ಹೋದನು. ನಡೆದ ಸಂಗತಿಗಳನ್ನೆಲ್ಲ ಯಕೋಬನು ಲಾಬಾನನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಲಾಬಾನನು ತನ್ನ ಸೋದರಳಿಯನು ಬಂದ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರಕೊಂಡು ಬಂದನು. ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು. ಅಧ್ಯಾಯವನ್ನು ನೋಡಿ |