ಆದಿಕಾಂಡ 29:15 - ಪರಿಶುದ್ದ ಬೈಬಲ್15 ಒಂದು ದಿನ ಲಾಬಾನನು ಯಾಕೋಬನಿಗೆ, “ನೀನು ಸಂಬಳ ತೆಗೆದುಕೊಳ್ಳದೆ ನನ್ನ ಬಳಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ. ನೀನು ನನ್ನ ಸಂಬಂಧಿಕನೇ ಹೊರತು ಸೇವಕನಲ್ಲ. ನಾನು ನಿನಗೆ ಎಷ್ಟು ಸಂಬಳ ಕೊಡಲಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಬಳಿಕ ಲಾಬಾನನು ಯಕೋಬನಿಗೆ, “ನೀನು ನನ್ನ ಸಂಬಂಧಿಯೆಂದ ಮಾತ್ರಕ್ಕೆ ಬಿಟ್ಟಿ ಸೇವೆ ಮಾಡಿಸಿಕೊಳ್ಳುವುದು ಸರಿಯಲ್ಲ; ನಿನ್ನ ಕೆಲಸಕ್ಕೆ ಏನು ಸಂಬಳ ಕೊಡಲಿ, ಹೇಳು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಮೇಲೆ ಲಾಬಾನನು ಅವನನ್ನು - ನೀನು ನನ್ನನ್ನು ಸಂಬಂಧಿಯೆಂದು ಸುಮ್ಮನೆ ಸೇವಿಸುವದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಕನಾಗಿರುವುದರಿಂದ ಸುಮ್ಮನೆ ನನಗೆ ಸೇವೆ ಮಾಡಬೇಕೆ? ನಿನ್ನ ಸಂಬಳ ಎಷ್ಟೆಂಬುದನ್ನು ನನಗೆ ಹೇಳು?” ಎಂದನು. ಅಧ್ಯಾಯವನ್ನು ನೋಡಿ |