Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:16 - ಪರಿಶುದ್ದ ಬೈಬಲ್‌

16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಹಿರಿಯವಳ ಹೆಸರು ಲೇಯಾ; ಕಿರಿಯವಳ ಹೆಸರು ರಾಹೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಖೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಲಾಬಾನನಿಗೆ ಇಬ್ಬರು ಪುತ್ರಿಯರಿದ್ದರು. ದೊಡ್ಡವಳ ಹೆಸರು ಲೇಯಳು, ಚಿಕ್ಕವಳ ಹೆಸರು ರಾಹೇಲಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:16
10 ತಿಳಿವುಗಳ ಹೋಲಿಕೆ  

ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು!


ಅಬ್ರಹಾಮನನ್ನು ಮತ್ತು ಅವನ ಹೆಂಡತಿಯಾದ ಸಾರಳನ್ನು ಆ ಗವಿಯಲ್ಲಿ ಸಮಾಧಿ ಮಾಡಲಾಗಿದೆ. ಇಸಾಕನನ್ನು ಮತ್ತು ರೆಬೆಕ್ಕಳನ್ನು ಅಲ್ಲಿ ಸಮಾಧಿ ಮಾಡಲಾಗಿದೆ. ನನ್ನ ಹೆಂಡತಿಯಾದ ಲೇಯಳನ್ನು ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. ಬೆನ್ಯಾಮೀನ


ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್. ಇವರು ಯಾಕೋಬನ ಹೆಂಡತಿಯಾದ ಲೇಯಳ ಮಕ್ಕಳು. ಲೇಯಳು ಆ ಮಕ್ಕಳಿಗೆ ಪದ್ದನ್‌ಅರಾಮಿನಲ್ಲಿ ಜನ್ಮಕೊಟ್ಟಳು. ಅಲ್ಲಿ ಅವಳ ಮಗಳಾದ ದೀನ ಸಹ ಜನಿಸಿದಳು. ಈ ಕುಟುಂಬದಲ್ಲಿ ಮೂವತ್ಮೂರು ಮಂದಿ ಇದ್ದರು.


ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ಆದ್ದರಿಂದ ಯಾಕೋಬನು ರಾಹೇಲಳಿಗೆ ಮತ್ತು ಲೇಯಳಿಗೆ ತನ್ನ ಆಡುಕುರಿಗಳು ಮೇಯುತ್ತಿರುವ ಹೊಲದಲ್ಲಿ ತನ್ನನ್ನು ಭೇಟಿಯಾಗಬೇಕೆಂದು ಹೇಳಿದನು.


ಲೇಯಳು ಮತ್ತೆ ಬಸುರಾಗಿ ಆರನೆಯ ಮಗನನ್ನು ಹೆತ್ತಳು.


ರಾಹೇಲಳು ಸುಂದರವಾಗಿದ್ದಳು. ಲೇಯಳ ಕಣ್ಣುಗಳು ಸೌಮ್ಯವಾಗಿದ್ದವು.


ಯಾಕೋಬನು ದಾಸಿಯರನ್ನು ಮತ್ತು ಅವರ ಮಕ್ಕಳನ್ನು ಮುಂಭಾಗದಲ್ಲಿಯೂ ಲೇಯಳನ್ನು ಮತ್ತು ಅವಳ ಮಕ್ಕಳನ್ನು ಅವರ ಹಿಂಭಾಗದಲ್ಲಿಯೂ, ರಾಹೇಲಳನ್ನು ಮತ್ತು ಯೋಸೇಫನನ್ನು ಕೊನೆಯ ಸ್ಥಳದಲ್ಲೂ ಇರಿಸಿದನು.


ಒಂದು ದಿನ ಲಾಬಾನನು ಯಾಕೋಬನಿಗೆ, “ನೀನು ಸಂಬಳ ತೆಗೆದುಕೊಳ್ಳದೆ ನನ್ನ ಬಳಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ. ನೀನು ನನ್ನ ಸಂಬಂಧಿಕನೇ ಹೊರತು ಸೇವಕನಲ್ಲ. ನಾನು ನಿನಗೆ ಎಷ್ಟು ಸಂಬಳ ಕೊಡಲಿ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು