ಆದಿಕಾಂಡ 29:25 - ಪರಿಶುದ್ದ ಬೈಬಲ್25 ಮುಂಜಾನೆ ಯಾಕೋಬನು ಎದ್ದು ನೋಡಿದಾಗ ಅವನೊಂದಿಗೆ ಲೇಯಾ ಇದ್ದಳು. ಯಾಕೋಬನು ಲಾಬಾನನಿಗೆ, “ನೀನು ನನಗೆ ಮೋಸ ಮಾಡಿದೆ. ನಾನು ರಾಹೇಲಳನ್ನು ಮದುವೆ ಮಾಡಿಕೊಳ್ಳುವುದಕ್ಕಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿದೆ. ನೀನು ನನಗೇಕೆ ಮೋಸ ಮಾಡಿದೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆ ಹೆಣ್ಣು ಲೇಯಳೆಂದು ಯಕೋಬನಿಗೆ ಬೆಳಿಗ್ಗೆ ತಿಳಿಯಿತು. ಅವನು ಲಾಬಾನನಿಗೆ, “ನೀವು ನನಗೇಕೆ ಹೀಗೆ ಮಾಡಿದಿರಿ? ರಾಖೇಲಳಿಗಾಗಿ ಅಲ್ಲವೆ ನಾನು ನಿಮಗೆ ಸೇವೆಮಾಡಿದ್ದು? ನನಗೆ ಮೋಸಮಾಡಿದ್ದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಬೆಳಿಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಯಾಕೋಬನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದೆ? ರಾಹೇಲಳಿಗೋಸ್ಕರ ನಾನು ನಿನಗೆ ಸೇವೆಮಾಡಿದೆನಲ್ಲಾ? ಏಕೆ ನನಗೆ ಮೋಸಮಾಡಿದೆ?” ಎಂದನು. ಅಧ್ಯಾಯವನ್ನು ನೋಡಿ |
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.