ಆದಿಕಾಂಡ 29:27 - ಪರಿಶುದ್ದ ಬೈಬಲ್27 ಆದರೆ ಆಕೆಯ ಮದುವೆಯ ವಾರವನ್ನು ಮುಂದುವರಿಸು. ನಾನು ನಿನಗೆ ರಾಹೇಲಳನ್ನು ಸಹ ಮದುವೆ ಮಾಡಿಕೊಡುತ್ತೇನೆ. ಆದರೆ ನೀನು ನನಗೆ ಇನ್ನೂ ಏಳು ವರ್ಷ ಸೇವೆ ಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹಿರಿಯಳೊಡನೆ ಮದುವೆಯ ವಾರವನ್ನು ಕಳೆದುಬಿಡು; ಅನಂತರ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ. ಅವಳಿಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡುವೆಯಂತೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಕೆಯ [ಮದುವೆಯ] ವಾರವನ್ನು ಪೂರೈಸು; ಅನಂತರ ಈ ನನ್ನ ಕಿರೀ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರುಷ ಸೇವೆಮಾಡು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹಿರಿಯಳೊಡನೆ ಈ ವಾರವನ್ನು ಪೂರೈಸು. ತರುವಾಯ ನೀನು ಇನ್ನು ಬೇರೆ ಏಳು ವರ್ಷಗಳವರೆಗೆ ಸೇವೆ ಮಾಡಲು ಒಪ್ಪಿಕೊಂಡರೆ, ನಾನು ಕಿರಿಯ ಮಗಳನ್ನು ನಿನಗೆ ಕೊಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |