ಆದಿಕಾಂಡ 29:30 - ಪರಿಶುದ್ದ ಬೈಬಲ್30 ಯಾಕೋಬನು ರಾಹೇಲಳನ್ನೂ ಕೂಡಿದನು. ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿ ಆಕೆಗೋಸ್ಕರ ಇನ್ನೂ ಏಳು ವರ್ಷ ಸೇವೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯಕೋಬನು ರಾಖೇಲಳನ್ನು ಕೂಡಿದನು. ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿ ಇನ್ನೂ ಏಳು ವರ್ಷ ಸೇವೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾಕೋಬನು ರಾಹೇಲಳನ್ನೂ ಕೂಡಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳುವರುಷ ಸೇವೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯಾಕೋಬನು ರಾಹೇಲಳೊಂದಿಗೆ ಕೂಡಿ, ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಸಿದನು. ಇನ್ನೂ ಏಳು ವರ್ಷ ಲಾಬಾನನ ಬಳಿಯಲ್ಲಿ ಸೇವೆ ಮಾಡಿದನು. ಅಧ್ಯಾಯವನ್ನು ನೋಡಿ |
ನಾವು ನಿಮಗೆ, ‘ನಮಗೆ ಒಬ್ಬ ತಂದೆಯಿದ್ದಾನೆ, ಅವನು ವೃದ್ಧನಾಗಿದ್ದಾನೆ; ನಮಗೆ ಪ್ರಾಯದ ತಮ್ಮನಿದ್ದಾನೆ, ನಮ್ಮ ತಂದೆಗೆ ತುಂಬ ವಯಸ್ಸಾಗಿದ್ದಾಗ ಅವನು ಹುಟ್ಟಿದ್ದರಿಂದ ನಮ್ಮ ತಂದೆಯು ಅವನನ್ನು ಪ್ರೀತಿಸುತ್ತಾನೆ. ಆ ಕಿರಿಯ ಮಗನ ಸಹೋದರನು ಸತ್ತುಹೋದನು. ಆದ್ದರಿಂದ ಆ ತಾಯಿಯಲ್ಲಿ ಹುಟ್ಟಿದವರಲ್ಲಿ ಇವನೊಬ್ಬನೇ ಉಳಿದಿದ್ದಾನೆ. ನಮ್ಮ ತಂದೆಯು ಅವನನ್ನು ತುಂಬಾ ಪ್ರೀತಿಸುವನು’ ಎಂದು ಹೇಳಿದೆವು.