ಆದಿಕಾಂಡ 29:31 - ಪರಿಶುದ್ದ ಬೈಬಲ್31 ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಲೇಯಳು ಯಾಕೋಬನಿಗೆ ಅಲಕ್ಷ್ಯವಾದಳೆಂದು ಯೆಹೋವನು ನೋಡಿ ಆಕೆಯನ್ನು ಬಸುರಾಗುವಂತೆ ಮಾಡಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು. ಅಧ್ಯಾಯವನ್ನು ನೋಡಿ |
“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.