Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:32 - ಪರಿಶುದ್ದ ಬೈಬಲ್‌

32 ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ. ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೊ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಆ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. “ಸರ್ವೇಶ್ವರ ನನ್ನ ದೀನ ಸ್ಥಿತಿಯನ್ನು ನೋಡಿದ್ದಾರೆ, ಇನ್ನು ಮುಂದೆ ಗಂಡ ನನ್ನನ್ನು ಪ್ರೀತಿಸುತ್ತಾನೆ,” ಎಂದುಕೊಂಡು ಆ ಮಗುವಿಗೆ ‘ರೂಬೇನ್’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ; ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ರೂಬೇನೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:32
24 ತಿಳಿವುಗಳ ಹೋಲಿಕೆ  

ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಟ್ಟೆವು. ಆತನು ನಮ್ಮ ಕೂಗನ್ನು ಆಲಿಸಿದನು; ನಮ್ಮ ಸಂಕಟ, ವೇದನೆಗಳನ್ನು ನೋಡಿದನು.


ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.


ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.


ಎಲಿಜಬೇತಳು, “ನೋಡಿ, ಪ್ರಭುವು ನನಗೋಸ್ಕರ ಎಂಥಾ ಕಾರ್ಯಮಾಡಿದ್ದಾನೆ! ನನ್ನ ಜನರ ನಡುವೆ ನನಗಿದ್ದ ಅವಮಾನವನ್ನು ಪ್ರಭುವು ತೊಲಗಿಸಿದ್ದಾನೆ” ಎಂದು ಹೇಳಿದಳು.


ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು.


ಯೆಹೋವನೇ, ನನ್ನ ಸಂಕಟವನ್ನೂ ತೊಂದರೆಗಳನ್ನೂ ನೋಡು. ನನ್ನ ಪಾಪಗಳನ್ನೆಲ್ಲ ಕ್ಷಮಿಸು.


ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೋ” ಎಂದನು.


ಹನ್ನಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಹನ್ನಳು ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. ಅವಳು, “ಅವನ ಹೆಸರು ಸಮುವೇಲ, ಏಕೆಂದರೆ ನಾನು ಅವನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದ್ದೆ” ಎಂದಳು.


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


ಆ ರಾತ್ರಿ ಸಹೋದರರು ಒಂದು ಸ್ಥಳದಲ್ಲಿ ಇಳಿದುಕೊಂಡರು. ಸಹೋದರರಲ್ಲಿ ಒಬ್ಬನು ಕತ್ತೆಗೋಸ್ಕರ ಸ್ವಲ್ಪ ದವಸಧಾನ್ಯಗಳನ್ನು ತೆಗೆದುಕೊಳ್ಳಲು ತನ್ನ ಚೀಲವನ್ನು ಬಿಚ್ಚಿದಾಗ ತಾನು ಪಾವತಿ ಮಾಡಿದ್ದ ಹಣವು ಚೀಲದಲ್ಲಿರುವುದನ್ನು ನೋಡಿದನು.


ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.


ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ರೂಬೇನನು ಇಸ್ರೇಲನ ಚೊಚ್ಚಲಮಗ. ಅವನು ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿತ್ತು. ಆದರೆ ಅವನು ತನ್ನ ತಂದೆಯ ಉಪಪತ್ನಿಯೊಡನೆ ಸಂಭೋಗಿಸಿದ್ದರಿಂದ ಅವನ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ಆದ್ದರಿಂದ ವಂಶಾವಳಿಯಲ್ಲಿ ಚೊಚ್ಚಲ ಮಗನ ಸ್ಥಾನ ಅವನಿಗೆ ದೊರೆಯಲಿಲ್ಲ. ಯೆಹೂದನು ತನ್ನ ಎಲ್ಲಾ ಸಹೋದರರಿಗಿಂತ ಬಲಾಢ್ಯನಾದನು. ಆದ್ದರಿಂದ ಅವನ ಕುಲದಿಂದಲೇ ನಾಯಕರುಗಳು ಬಂದರು. ಆದರೆ ಚೊಚ್ಚಲ ಮಗನಿಗೆ ಸಿಗಬೇಕಾಗಿದ್ದ ಇತರ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ರೂಬೇನನ ಮಕ್ಕಳು ಯಾರೆಂದರೆ: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.


ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.


ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.


ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.


ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ.


ನಿಮ್ಮೊಡನಿದ್ದು ನಿಮಗೆ ಸಹಾಯಮಾಡುವ ಪುರುಷರು ಯಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್.


ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ಅದೇ ಪ್ರಕಾರ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು