ಆದಿಕಾಂಡ 29:33 - ಪರಿಶುದ್ದ ಬೈಬಲ್33 ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದು ನನಗೆ ಈ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಸಿಮೆಯೋನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆಕೆ, ಇನ್ನೊಮ್ಮೆ ಗರ್ಭಿಣಿಯಾಗಿ ಗಂಡು ಮಗುವನ್ನೇ ಹೆತ್ತಳು. “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆ, ಇದನ್ನು ತಿಳಿದೇ ಸರ್ವೇಶ್ವರ ನನಗೆ ಈ ಮಗನನ್ನು ದಯಪಾಲಿಸಿದರು,” ಎಂದು ಹೇಳಿ ಆ ಮಗನಿಗೆ ‘ಸಿಮೆಯೋನ್’ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆಕೆ ತಿರಿಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ಸಿಮೆಯೋನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಲೇಯಳು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಾನು ತಾತ್ಸಾರವಾಗಿದ್ದೆ ಎಂದು ಯೆಹೋವ ದೇವರು ಕೇಳಿ, ಇವನನ್ನು ನನಗೆ ಕೊಟ್ಟಿದ್ದಾರೆ,” ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |