ಆದಿಕಾಂಡ 29:35 - ಪರಿಶುದ್ದ ಬೈಬಲ್35 ನಂತರ ಲೇಯಾ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವನನ್ನು ಸ್ತುತಿಸುವೆನು” ಎಂದು ಹೇಳಿ ಆ ಮಗುವಿಗೆ ಯೆಹೂದ ಎಂದು ಹೆಸರಿಟ್ಟಳು. ನಂತರ ಲೇಯಳಿಗೆ ಮಕ್ಕಳಾಗುವುದು ನಿಂತುಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮಗದೊಮ್ಮೆ ಗರ್ಭಧರಿಸಿ ಈ ಸಾರಿಯೂ ಗಂಡು ಮಗುವನ್ನೇ ಹೆತ್ತಳು. "ಈಗ ಸರ್ವೇಶ್ವರಸ್ವಾಮಿಯ ಸ್ತುತಿಮಾಡುತ್ತೇನೆ,“ ಎಂದು ಹೇಳಿ ಆ ಮಗುವಿಗೆ “ಯೆಹೂದ" ಎಂದು ನಾಮಕರಣ ಮಾಡಿದಳು. ಆ ಮೇಲೆ ಆಕೆಗೆ ಗರ್ಭಧಾರಣೆ ಆಗುವುದು ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆಕೆಯು ತಿರಿಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು - ಈಗ ಯೆಹೋವನಿಗೆ ಉಪಕಾರಸ್ತುತಿ ಮಾಡುವೆನು ಎಂದು ಹೇಳಿ ಅದಕ್ಕೆ ಯೆಹೂದಾ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಗರ್ಭಧಾರಣೆಯಾಗುವದು ತಡವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ. ಅಧ್ಯಾಯವನ್ನು ನೋಡಿ |