Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:4 - ಪರಿಶುದ್ದ ಬೈಬಲ್‌

4 ಯಾಕೋಬನು ಅಲ್ಲಿದ್ದ ಕುರುಬರಿಗೆ, “ಸಹೋದರರೇ, ನೀವು ಎಲ್ಲಿಯವರು?” ಎಂದು ಕೇಳಿದನು. ಅವರು “ನಾವು ಹಾರಾನಿನವರು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯಕೋಬನು ಅವರಿಗೆ, “ಏನ್ರಪ್ಪ, ನೀವು ಯಾವ ಊರಿನವರು?” ಎಂದು ವಿಚಾರಿಸಿದನು. ಅವರು, “ನಾವು ಖಾರಾನ್ ಊರಿನವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಕೋಬನು ಅವರಿಗೆ - ಅಣ್ಣಂದಿರಾ, ನೀವು ಯಾವ ಊರಿನವರು ಎಂದು ಕೇಳಲು - ನಾವು ಖಾರಾನ್ ಊರಿನವರು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾಕೋಬನು ಅವರಿಗೆ, “ನನ್ನ ಸಹೋದರರೇ, ನೀವು ಎಲ್ಲಿಯವರು?” ಎಂದಾಗ. ಅವರು, “ನಾವು ಹಾರಾನಿನವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:4
7 ತಿಳಿವುಗಳ ಹೋಲಿಕೆ  

ಯಾಕೋಬನು ಬೇರ್ಷೆಬವನ್ನು ಬಿಟ್ಟು ಹಾರಾನಿಗೆ ಹೋದನು.


ಆದ್ದರಿಂದ ಮಗನೇ, ನಾನು ಹೇಳಿದಂತೆ ಮಾಡು. ನನ್ನ ಅಣ್ಣನಾದ ಲಾಬಾನನು ಹಾರಾನಿನಲ್ಲಿ ವಾಸವಾಗಿದ್ದಾನೆ. ಅವನ ಬಳಿಗೆ ಹೋಗಿ ಅಡಗಿಕೊ.


“ಆದ್ದರಿಂದ ಅಬ್ರಹಾಮನು ಖಾಲ್ದೆಯ ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.


ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.


ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ ಮತ್ತು ತನಗೆ ಸೊಸೆಯೂ ಅಬ್ರಾಮನ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದನು.


ಕುರಿಮಂದೆಗಳೆಲ್ಲ ಒಟ್ಟಿಗೆ ಸೇರಿದ ಮೇಲೆ, ಕುರುಬರು ಬಾವಿಯ ಮೇಲಿನ ಕಲ್ಲನ್ನು ಉರುಳಿಸುತ್ತಿದ್ದರು. ಆಮೇಲೆ ಎಲ್ಲಾ ಕುರಿಗಳು ಬಾವಿಯ ನೀರನ್ನು ಕುಡಿಯುತ್ತಿದ್ದವು. ಕುರಿಗಳು ನೀರು ಕುಡಿದಾದ ಮೇಲೆ ಕುರುಬರು ಕಲ್ಲನ್ನು ಮತ್ತೆ ಮುಚ್ಚುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು